December 23, 2024

Newsnap Kannada

The World at your finger tips!

President , I.N.D.I.A , congress

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು

Spread the love

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕೆಪಿಸಿಸಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಭಾರತದಲ್ಲಿ ಪ್ರತಿಭಾವಂತರು ಸಾಕಷ್ಟು ಇದ್ದಾರೆ: ಶ್ಲಾಘಿಸಿದ ಪುಟಿನ್

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದ್ದು, ಇಂದು ಮಧ್ಯಾಹ್ನ 2:30 ಕ್ಕೆ ಸಮಾವೇಶ ಆರಂಭವಾಗಲಿದೆ.ಟೋಲ್ ಗೇಟ್, ಹೆಬ್ಬಾಳ, ಮೇಖ್ರಿ ಸರ್ಕಲ್ ಬಳಿ ಖರ್ಗೆಗೆ ಅದ್ದೂರಿ ಸ್ವಾಗತ ಸಿಗಲಿದೆ. ಕಾರ್ಯಕ್ರಮದಲ್ಲಿ 50 ಸಾವಿರ ಜನರು ಸೇರಲಿದ್ದಾರೆ, ರಣದೀಪ್ ಸಿಂಗ್ ಸುರ್ಜೆವಾಲಾ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಉಪಸ್ಥಿತರಿರುತ್ತಾರೆ.

Copyright © All rights reserved Newsnap | Newsever by AF themes.
error: Content is protected !!