November 5, 2024

Newsnap Kannada

The World at your finger tips!

WhatsApp Image 2023 05 13 at 7.11.13 PM

ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ‘ಅಕ್ಕಿ’ ಡೌಟ್ : ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Spread the love

ಬೆಂಗಳೂರು : ಕೇಂದ್ರದೊಂದಿಗೆ ಜಠಾಪಟಿ ನಡೆಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಡೌಟ್.

ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಾಭಾಗ್ಯ ಯೋಜನೆಯೂ ಒಂದು. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದರು.

ಬಿಪಿಎಲ್, ಅಂತ್ಯೋದಯ ಕಾರ್ಡ್​ನವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ. ಜುಲೈ 1ರಿಂದ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ. ಇದಕ್ಕಾಗಿ ತಿಂಗಳಿಗೆ 2 ಲಕ್ಷದ 28 ಸಾವಿರ ಮೆಟ್ರಿಕ್​ ಟನ್ ಹೆಚ್ಚುವರಿ​ ಅಕ್ಕಿ ಬೇಕು ಎಂದು ಸಿಎಂ ತಿಳಿಸಿದರು.

ಅನ್ನಭಾಗ್ಯ ಯೋಜನೆಗಾಗಿ ತಿಂಗಳಿಗೆ 840 ಕೋಟಿ ರೂ. ವೆಚ್ಚ ಆಗಲಿದೆ. ಪ್ರತಿ ವರ್ಷಕ್ಕೆ 10,092 ಕೋಟಿ ರೂ. ಬೇಕು. ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ಭಾರತೀಯ ಆಹಾರ ನಿಗಮ(ಎಫ್ ಸಿಐ) ಡೆಪ್ಯುಟಿ ಮ್ಯಾನೇಜರ್​ ಜೊತೆ ಚರ್ಚೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಡೆಪ್ಯುಟಿ ಮ್ಯಾನೇಜರ್ ಜೂನ್ 12 ರಂದು ತಮಗೆ ಪತ್ರ ಬರೆದು ಹೆಚ್ಚುವರಿ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಆದರೆ ಈಗ ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದು, ಅಕ್ಕಿ ಸಂಗ್ರಹ ಇದ್ದರೂ ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಉಚಿತ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ, ಡೆಪ್ಯುಟಿ ಮ್ಯಾನೇಜರ್​ 7 ಲಕ್ಷ ಟನ್​ ಅಕ್ಕಿ ಸಂಗ್ರಹ ಇದೆ ಎಂದಿದ್ದರು. ಅಕ್ಕಿ ಸಂಗ್ರಹ ಇದ್ದರೂ ಕೇಂದ್ರ ಯಾಕೆ ಪೂರೈಕೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದೆ. ಅಕ್ಕಿ ಪೂರೈಸಲು ಛತ್ತೀಸ್​ಗಢ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಬಿಜೆಪಿಯವರು ಬಡವರ ವಿರೋಧಿಗಳು ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಾಲ ಮನ್ನಾ, ಬಡ್ಡಿ ಇಲ್ಲದೇ 5 ಲಕ್ಷ- ಶೇ.3 ಬಡ್ಡಿ ದರದಲ್ಲಿ 20 ಲಕ್ಷ ರೂ.ಗೆ ಹೆಚ್ಚಳ-ಸಚಿವ ರಾಜಣ್ಣ

ಕೇಂದ್ರ ಸರ್ಕಾರ ನಮಗೇನು ಪುಕ್ಕಟೆಯಾಗಿ ಅಕ್ಕಿ ಕೊಡುವುದಿಲ್ಲ. ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ನಾವು ದುಡ್ಡು ಕೊಡುತ್ತೇವೆ. ಖಾಸಗಿಯವರಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರಕ್ಕೆ ಪೂರೈಸುತ್ತಿಲ್ಲ ಎಂದರು.

Copyright © All rights reserved Newsnap | Newsever by AF themes.
error: Content is protected !!