December 22, 2024

Newsnap Kannada

The World at your finger tips!

dasara 1

ಅಲಂಕೃತ ದಸರಾ ಗಜಗಳಿಗೆ ಪುಷ್ಪಾರ್ಚನೆ – ಗಜಪಯಣಕ್ಕೆ ಚಾಲನೆ

Spread the love

ಮೈಸೂರು : ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

9.45 ರಿಂದ 10-15 ರ ನಡುವೆ ಸಲುವ ತುಲಾ ಶುಭ ಲಗ್ನದಲ್ಲಿ ಸಂಪ್ರದಾಯದಂತೆ ಮೈಸೂರು ಅರಮನೆ ಪುರೋಹಿತ ಪ್ರಹ್ಲಾದ್ ರಾವ್ ತಂಡ ವೀರನಹೊಸಹಳ್ಳಿ ಗೇಟ್ ಬಳಿಯ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನೆರೆವೇರಿಸಿದರು.

ಗಜಪಯಣದಲ್ಲಿ ಅಭಿಮನ್ಯು ನೇತೃತ್ವದಲ್ಲಿ ಅರ್ಜುನ, ಭೀಮಾ, ಗೋಪಿ, ಧನಂಜಯಾ, ವರಲಕ್ಷ್ಮಿ, ವಿಜಯಾ, ಮಹೇಂದ್ರ ಹಾಗೂ ಕಂಜನ್ ಆನೆಗಳು ಮೈಸೂರಿಗೆ ಆಗಮಿಸಲ್ಲಿದೆ.ತ. ನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ವಿರೋಧಿಸಿ ರೈತ ಹಿತರಕ್ಷಣಾ ಸಮಿತಿ ಧರಣಿ

ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಹುಣಸೂರು ಶಾಸಕರಾದ ಹರೀಶ್ ಗೌಡ, ಮೇಯರ್ ಶಿವಕುಮಾರ್ , ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ಅರಣ್ಯಧಿಕಾರಿಗಳಾದ ಸೌರಭ್ ಕುಮಾರ್ ಹಾಗೂ ಇತರೆ ಗಣ್ಯರು ಉಪಸ್ಧಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!