ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರೆಗ್ನೆನ್ಸಿಯ ಬಗ್ಗೆ ಹಂಚಿಕೊಂಡಿದ್ದಾರೆ. ಕಳೆದ ಏಪ್ರಿಲ್ ತಿಂಗಳಲ್ಲಿ ಮದುವೆಯಾಗಿದ್ದ ಈ ಜೋಡಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.
ರಣಬೀರ್ ಕಪೂರ್ ಮಗುವಿನ ಸ್ಕ್ಯಾನಿಂಗ್ ಫೋಟೊ ನೋಡುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಆಲಿಯಾ “ನಮ್ಮ ಮಗು ಬರುತ್ತಿದೆ” ಎಂದು ಹೇಳಿದ್ದಾರೆ. ಇದನ್ನು ಓದಿ – ಕೃಷಿಹೊಂಡದಲ್ಲಿ ಈಜಲು ಹೋಗಿ ಬೆಂಗಳೂರಿನ ಯುವಕರಿಬ್ಬರು ಜಲ ಸಮಾಧಿ
ಅಷ್ಟೇ ಅಲ್ಲದೆ ಒಂದು ಸಿಂಹದ ಕುಟುಂಬವನ್ನು ಕೂಡ ಹಂಚಿಕೊಂಡಿದ್ದಾರೆ. ಆಲಿಯಾ ಭಟ್ ಪೋಸ್ಟ್ ನೋಡಿ ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಬಾಲಿವುಡ್ ಕಲಾವಿದರಾದ ಮೌನಿ ರಾಯ್, ಜಾಕ್ವೆಲಿನ್ ಫರ್ನಾಂಡೀಸ್, ರಿಧಿಮಾ ಕಪೂರ್, ಪ್ರಿಯಾಂಕಾ ಚೋಪ್ರಾ, ಟೈಗರ್ ಶ್ರಾಫ್ ಮುಂತಾದವರು ಈ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.ಏಪ್ರಿಲ್ 14ರಂದು ಖ್ಯಾತ ನಟ ರಣಬೀರ್ ಜೊತೆ ಹಸೆಮಣೆ ಏರಿದ್ದ ನಟಿ ಅಲಿಯಾ ಭಟ್ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
More Stories
ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ