ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೆಲಸದ ದಿನಗಳನ್ನು ಬಳಕೆ ಮಾಡದೆ ನಿಗದಿತ ಈ ಮೂರು ರಜೆಯ ದಿನಗಳಲ್ಲಿ ಸಾಹಿತ್ಯದ ಉತ್ಸವವನ್ನು ಮಾಡಲು ತೀರ್ಮಾನಿಸಿದ್ದೇವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌಡ ಅವರ ಸರ್ವಾಧ್ಯಕ್ಷತೆಯಲ್ಲಿ ಭುವನೇಶ್ವರಿಯ ಉತ್ಸವ ನಡೆಯಲಿದೆ ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು