ರಾಜ್ಯದ ಎಲ್ಲಾ ಶಾಲೆಗಳಲ್ಲೂ ಮೊಟ್ಟೆ ನೀಡಲು ಒಪ್ಪಿಗೆ : ವಾರ್ಷಿಕ 350 ಕೋಟಿ ರು ವೆಚ್ಚ

Team Newsnap
1 Min Read

ರಾಜ್ಯದಲ್ಲಿನ ಎಲ್ಲಾ ಶಾಲೆಗಳಲ್ಲೂ ಬಿಸಿಯೂಟದ ಜೊತೆ ಮೊಟ್ಟೆ ನೀಡುವ ಯೋಜನೆಗೆ ಸಿಎಂ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿದೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಸರ್ಕಾರಿ ಹಾಗೂ ಅನುದಾನಿತ 1-8 ನೇ ತರಗತಿಯ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ ನೀಡಲಾಗುತ್ತಿತ್ತು.

ಈಗ ಈ ಯೋಜನೆಯು ರಾಜ್ಯದ ಎಲ್ಲಾ ಶಾಲೆಗಳಿಗೂ ವಿಸ್ತರಿಸಲು ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು.ಶಿಕ್ಷಣ ಇಲಾಖೆ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿ ಆದೇಶಿಸಿದೆ.

ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ ಕೊಡಲಾಗುತ್ತದೆ. ಮೊಟ್ಟೆ ಸೇವಿಸದ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 350 ಕೋಟಿ ರೂಪಾಯಿ ವೆಚ್ಚದ ಅಂದಾಜು ಪಟ್ಟಿಗೆ ಕೂಡ ಒಪ್ಪಿಗೆ ನೀಡಲಾಗಿದೆ.

ಕೆಆರ್ ಎಸ್ ನಲ್ಲಿ ಕಾವೇರಿ ಮಾತೆಗೆ ಬಾಗೀನ ಸಮರ್ಪಿಸಿದ ಸಿಎಂ ಬೊಮ್ಮಾಯಿ

ಆರ್ಥಿಕ ಇಲಾಖೆ ರಾಜ್ಯದ ಎಲ್ಲಾ ಶಾಲೆಗಳಿಗೂ ಮೊಟ್ಟೆ ಯನ್ನುನ100 ದಿನಗಳ ಬದಲು 46 ದಿನಗಳು ಮಾತ್ರ ಬಿಸಿಯೂಟದ ಜತೆ ಮೊಟ್ಟೆ ನೀಡಲು ಅವಕಾಶ ನೀಡಲಾಗಿದೆ. ಇದರಿಂದ ವಾರ್ಷಿಕ 125 ಕೋಟಿ ರು ವೆಚ್ಚವಾಗಲಿದೆ.

Share This Article
Leave a comment