BMS ಟ್ರಸ್ಟ್ ಅಕ್ರಮದ ಆರೋಪ – ಮೂರು ಬೇಡಿಕೆ ಸರ್ಕಾರದ ಮುಂದಿಟ್ಟ ಮಾಜಿ CM ಕುಮಾರಸ್ವಾಮಿ

Team Newsnap
1 Min Read

ಟ್ರಸ್ಟ್ ಅಕ್ರಮದ ವಿಚಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ತಲೆದಂಡಕ್ಕೆ ಜೆಡಿಎಸ್‌‌ ಬಿಗಿ ಪಟ್ಟು ಹಿಡಿದಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡಿ, ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

1) ‘BMS ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು.

2) ಟ್ರಸ್ಟ್‌ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು.

3) ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಕೂಡಲೇ ರಾಜೀನಾಮೆ ನೀಡಬೇಕು.

BMS ಟ್ರಸ್ಟ್ ಕುರಿತು ಟ್ವೀಟ್ ಗೆ ಪ್ರತಿಕ್ರಿಯಿಸಿ ಬಿಜೆಪಿ ಸರ್ಕಾರ ಕಾನೂನು ರೀತ್ಯ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.ಇದನ್ನು ಓದಿ –ವಾಯುಪಡೆ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿ ಅನುಮಾನಾಸ್ಪದ ಸಾವು: 6 ಮಂದಿ ಸಿಬ್ಬಂದಿ ವಿರುದ್ಧ FIR

ಕಾನೂನು ರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸರಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟ ಭದ್ರರಿಗೆ ಧಾರೆ ಎರೆದು ಕೊಡುವುದೆ ಸಚಿವರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿಯಾಗಿದೆ ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟು ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ʼನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರವಾಗಿದೆ .

ಉನ್ನತ ಶಿಕ್ಷಣ ಸಚಿವರೇ, 1957ರಲ್ಲಿ ರಚನೆಗೊಂಡು ನೋಂದಣಿಯಾದ BMS ಟ್ರಸ್ಟಿನ ಮೂಲ ಡೀಡನ್ನು ಒಮ್ಮೆ ಓದಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ.

ಆದರೆ, ನೀವು ಜನರಿಗೆ & ಸರಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share This Article
Leave a comment