ಆರ್‌ಟಿಒ ಚೆಕ್‌ಪೋಸ್ಟ್‌ಗಳಲ್ಲಿ ಲಂಚ ವಸೂಲಿಯ ಆರೋಪ ಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಬೀದರ್, ಬಳ್ಳಾರಿ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 9 ರ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರಿಗೆ ವಾಹನ ಸವಾರರಿಂದ ಹಣ ವಸೂಲಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಲಂಚ ವಸೂಲಿಯ ಆರೋಪದ ಮೇಲೆ ಈ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿ, ಆರ್‌ಟಿಒ ಕಚೇರಿಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ಪೋಸ್ಟ್ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ಮಧ್ಯರಾತ್ರಿ 2 ಗಂಟೆಗೆ ದಾಳಿ ಪ್ರಾರಂಭವಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಸಂಗ್ರಹಿಸಲಾಗಿದ್ದ ಹಣವನ್ನು ವಶಪಡಿಸಿಕೊಂಡು, ತಪಾಸಣೆ ಮುಂದುವರಿಸಲಾಗಿದೆ.
ಈ ದಾಳಿಯನ್ನು ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಡಿವೈಎಸ್ಪಿ ವಸಂತಕುಮಾರ್, ರಫೀಕ್ ಹಾಗೂ ಸಂಗಮೇಶ್ ಸೇರಿದ ತಂಡ ನಡೆಸಿದೆ.ಇದನ್ನು ಓದಿ –ನಾಗಮಂಗಲ ಗಲಭೆಗೆ ಟ್ವಿಸ್ಟ್ – ದೂರು ನೀಡಿದ್ದ ಪಿಎಸ್‌ಐ ಅಮಾನತು
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಲ ಕ್ರಾಸ್ ಬಳಿ ಇರುವ ಆರ್‌ಟಿಒ ಚೆಕ್‌ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ಮೂರು ಗಂಟೆಗಳಿನಿಂದ ತೀವ್ರ ತಪಾಸಣೆ ಮಾಡುತ್ತಿದ್ದಾರೆ. ಚೆಕ್‌ಪೋಸ್ಟ್‌ನ ದಾಖಲೆಗಳ ಪರಿಶೀಲನೆಗೂ ಅಧಿಕಾರಿಗಳು ತೊಡಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು