ನಿವೇಶನ ಪರಭಾರೆ ಆರೋಪ : ಮೂವರು ಪಿಡಿಒ ಅಮಾನತ್ತು

Team Newsnap
1 Min Read

ಚನ್ನರಾಯಪಟ್ಟಣ :
ಕರ್ತವ್ಯ ಲೋಪದ ಆರೋಪದ ಮೇಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮೂವರು ಪಿಡಿಒಗಳನ್ನು ಅಮಾನತುಗೊಳಿಸಿ ಹಾಸನ ಜಿ ಪಂ ಸಿಇಒ ಬಿ ಆರ್ ಪೂರ್ಣಿಮಾ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಮಂಜೂರು ಮಾಡಿಕೊಟ್ಟಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮೂವರು ಪಿಡಿಒಗಳನ್ನು ಅಮಾನತು ಮಾಡಿದ್ದಾರೆ.

ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ.

ಡಿ ಕಾಳೇನಹಳ್ಳಿ ಪಿಡಿಒ ಸಿಎನ್ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ಮೂವರು ಚನ್ನರಾಯಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು.

ಚನ್ನರಾಯಪಟ್ಟಣ ತಾಲ್ಲೂಕಿನ ಬಳದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮಿಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿ ಮಾಡಿರುವ ಹಿನ್ನೆಲೆಯಲ್ಲಿ ಈ ಮೂವರನ್ನು ಅಮಾನತು ಮಾಡಲಾಗಿದೆ.

Share This Article
Leave a comment