ರಾಮನಗರ: ಚನ್ನಪಟ್ಟಣ ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.
ಮಹಿಳೆಯೊಬ್ಬಳು ಅಕ್ಕೂರು ಠಾಣೆಯಲ್ಲಿ ದೂರು ನೀಡಿದ್ದು, 2 ದಿನದ ಹಿಂದೆ ಗಣೇಶ ವಿಸರ್ಜನೆ ವೇಳೆ ರಾಜು ನನ್ನ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು, ನನ್ನ ಮನೆ ಮುಂದೆಯೇ ನನ್ನ ಫೋಟೋ ತೆಗೆದು ರೇಗಿಸಿ ಕಿರುಕುಳ ನೀಡಿದ್ದಾನೆ ಎಂದು ದೂರು ನೀಡಿದ್ದಾಳೆ.
ಗಣೇಶ ಮೂರ್ತಿಯ ಮೆರವಣಿಗೆ ದಿನ ರಾತ್ರಿ 11:30 ಸಮಯದಲ್ಲಿ ಘಟನೆ ನಡೆದಿದ್ದು, ಮನೆಯ ಎದುರು ರಸ್ತೆಯಲ್ಲಿ ನಿಂತಿದ್ದ ವೇಳೆ ಆರೋಪಿ ಬಂದು ಮಹಿಳೆಯ ಹೆಗಲ ಮೇಲೆ ಕೈ ಹಾಕಿ ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದನಂತೆ. ಅಲ್ಲದೇ ಮಹಿಳೆಯ ಫೋಟೋವನ್ನು ತೆಗೆದು ಬೇರೆಯವರಿಗೆ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಹಿಂದೆ ಕರೆ ಮಾಡಿ ಕಿರುಕುಳ ನೀಡಿದ್ದ ಆರೋಪವನ್ನು ಮಹಿಳೆ ಮಾಡಿದ್ದು, ಲೋಕಸಭಾ ಚುನಾವಣಾ ಸಮಯದಲ್ಲಿ ಕರೆ ಮಾಡಿ ಕಾಫಿ ಡೇ ಹೋಗೋಣಾ ಮತ್ತು ಹಲವು ಬಾರಿ ಮೈಕೈ ಮುಟ್ಟಿ ತಮ್ಮ ಗೌರವಕ್ಕೆ ಚ್ಯುತಿ ತರುವಂತೆ ನಡೆದುಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಚನ್ನಪಟ್ಟಣದ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಗೆ ಆಪ್ತ ವಲಯದಲ್ಲಿ ಆರೋಪಿ ರಾಜು ಗುರುತಿಸಿಕೊಂಡಿದ್ದನೆಂಬ ಮಾಹಿತಿ ಲಭ್ಯವಾಗಿದೆ.
ಆರೋಪಿ ಚನ್ನಪಟ್ಟಣದ ತೂಬಿನಕೆರೆ ಗ್ರಾಮದ ನಿವಾಸಿಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಚೀನಾದಲ್ಲಿ ಮತ್ತೊಂದು ಹೊಸ ವೈರಸ್ ಪತ್ತೆ
ಸಂತ್ರಸ್ತ ಮಹಿಳೆ ದೂರಿನಲ್ಲಿ ಕಾನೂನು ಕ್ರಮವಹಿಸಿ ಎಂದು ಆಗ್ರಹಿಸಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ