ಇದರಿಂದಾಗಿ ಸ್ವಾಮೀಜಿಗೆ ಜೈಲೇ ಗತಿಯಾಗಿದೆ.ಸುತ್ತೂರು ದೇಶಿಕೇಂದ್ರ ಶ್ರೀಗಳಿಂದ ಸೆ 28 ರಂದು ಶ್ರೀರಂಗಪಟ್ಟಣ ದಸರಾ ಉದ್ಘಾಟನೆ
ಜಾಮೀನು ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದೆ.
ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಸ್ವಾಮೀಜಿಗೆ ಬುಧವಾರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗದಿಂದ ಇಂದು ಮತ್ತೆ ಚಿತ್ರದುರ್ಗಕ್ಕೆ ಕರೆತರಲಾಗಿತ್ತು.
ನ್ಯಾಯಾಲಯದ ಸೂಚನೆ ಮೇರೆಗೆ ಸ್ವಾಮೀಜಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಶಿವಮೂರ್ತಿ ಅವರನ್ನು ಪೊಲೀಸ್ ವಾಹನದಲ್ಲಿ ಚಿತ್ರದುರ್ಗದ ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಕರೆ ತರಲಾಯಿತು. ಬಳಿಕ ಅಲ್ಲಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು