ಯುವಕರ ಮೇಲೆ ಹಣ ಕಳ್ಳತನ ಮಾಡಿದ ಆರೋಪ ಮೇಲೆ ಮೂವರು ಯುವಕರ ತಲೆ ಬೋಳಿಸಿ ಅವಮಾನಿಸಿದ ಘಟನೆ ಮೈಸೂರು ಸಮೀಪದ ಬೀರುಹುಂಡಿಯಲ್ಲಿ ಜರುಗಿದೆ.
ಪೋಸ್ಟ್ ಆಫೀಸ್ ಸಿಬ್ಬಂದಿ ಈ ಕೃತ್ಯ ನಡೆಸಿದ್ದಾರೆಂದು ಹೇಳಲಾಗಿದೆ.
ಅವಮಾನ ತಾಳಲಾರದೆ ಯುವಕ ಕುಮಾರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ
ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ತಲೆಬೋಳಿಸಿಕೊಂಡ ಅವಮಾನ ತಾಳಲಾರದೇ ಮತ್ತಿಬ್ಬರು ಯುವಕರು ನಾಪತ್ತೆಯಾಗಿದ್ದಾರೆ.
ಬೀರುಹುಂಡಿ ಪೋಸ್ಟ್ ಆಫೀಸ್ ಸಿಬ್ಬಂದಿ ರಾಣಿ ಹಾಗೂ ಗ್ರಾ.ಪಂ. ಕಚೇರಿ ಸಿಬ್ಬಂದಿ ಸ್ವಾಮಿಯಿಂದ ಯುವಕರ ತಲೆ ಬೋಳಿಸಿ ಕೃತ್ಯ ನಡೆಸಿದ್ದಾರೆ ಎಂದು ದೂರಲಾಗಿದೆ.
ಯುವಕರ ಪರ ಜಾತ್ಯತೀತ ಮಹಿಳಾ ರಕ್ಷಣಾ ವೇದಿಕೆ ಹಾಗೂ ಲಕ್ಷ್ಮಿ ಚಾರಿಟಬಲ್ ಟ್ರಸ್ಟಿನ ಸದಸ್ಯರು ಪ್ರತಿಭಟನೆ ನಡೆಸಿದರು. ನಂತರ
ರತ್ನ ಮತ್ತು ರಾಣಿಗೌಡರಿಂದ ಜಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಇದುವರೆಗೂ ದೂರು ಮಾತ್ರ ದಾಖಲಿಸಿಕೊಂಡಿಲ್ಲ.
- ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ