ಭ್ರಷ್ಟಾಚಾರ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆ ನಡೆಸಲು ಆದೇಶ ನೀಡಿದ್ದ ಬೆನ್ನಲ್ಲೇ ದೇಶ್ ಮುಖ್ ತಮ್ಮ ಸ್ಥಾನಕ್ಕೆ ಸೋಮವಾರ(ಏಪ್ರಿಲ್ 05) ರಾಜೀನಾಮೆ ನೀಡಿದ್ದಾರೆ.
ತಾನು ಯಾವುದೇ ತಪ್ಪು ಮಾಡಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದಿಲ್ಲ ಎಂದು ದೇಶ್ ಮುಖ್ ಬಿಜೆಪಿ ಒತ್ತಾಯಕ್ಕೆ ಉತ್ತರ ನೀಡಿದ್ದರು.
ಈಗ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದ್ದ ನಿಟ್ಟಿನಲ್ಲಿ ನೈತಿಕ ನೆಲೆಗಟ್ಟಿನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ದೇಶ್ ಮುಖ್ ತಿಳಿಸಿರುವುದಾಗಿ ವರದಿಗಳು ಬಂದಿವೆ.
ಅನಿಲ್ ದೇಶಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ 15 ದಿನದೊಳಗೆ ಸಿಬಿಐ ಪ್ರಾಥಮಿಕ ತನಿಖೆಯನ್ನು ಆರಂಭಿಸಬೇಕು ಎಂದು ಬಾಂಬೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿತ್ತು.
ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬಯಿನ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಪರಂಬೀರ್ ಸಿಂಗ್, ಹಣ ವಸೂಲಿ ಮತ್ತು ಕಾನೂನು ಬಾಹಿರವಾಗಿ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದಾಗಿ ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ದೇಶಮುಖ್ ವಿರುದ್ಧ ತನಿಖೆ ನಡೆಸಲು ಆದೇಶ ನೀಡಬೇಕೆಂದು ಕೋರಿ ಪರಂಬೀರ್ ಸಿಂಗ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಎಫ್ ಐ ಆರ್ ಏಕೆ ದಾಖಲಿಸಿಲ್ಲ ? :
ಮಹಾರಾಷ್ಟ್ರ ಗೃಹ ಸಚಿವ ದೇಶ್ ಮುಖ್ ವಿರುದ್ಧ ಯಾಕೆ ಎಫ್ ಐಆರ್ ದಾಖಲಿಸಿಲ್ಲ ಎಂದು ಬಾಂಬೆ ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿತ್ತು.
ನೀವೊಬ್ಬ ಪೊಲೀಸ್ ಕಮಿಷನರ್, ಯಾಕೆ ನೀವು ಕಾನೂನು ಮೀರಿ ನಡೆದುಕೊಳ್ಳುತ್ತೀರಿ? ಪೊಲೀಸ್ ಅಧಿಕಾರಿಗಳು, ಸಚಿವರು, ರಾಜಕಾರಣಿಗಳು ಕಾನೂನಿಗಿಂತ ಮಿಗಿಲಾದವರೇ ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿ.ಜೆ. ದತ್ತ ಪ್ರಶ್ನಿಸಿದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ