January 2, 2025

Newsnap Kannada

The World at your finger tips!

road change

ಮೂರು ದಿನಗಳ ಕಾಲ ಮೈಸೂರು-ಬೆಂಗಳೂರು ಸಂಚಾರಕ್ಕೆ ಪರ್ಯಾಯ ಮಾರ್ಗ

Spread the love

ರಾಮನಗರ ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರದಿಂದಾಗಿ ಕೆರೆಕಟ್ಟೆಗಳು ತುಂಬಿ ರಸ್ತೆಗೆ ಕೋಡಿ ಹರಿದಿದೆ . ಹೀಗಾಗಿ ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳಿಗೆ ಮೂರು ದಿನಗಳ ಕಾಲ ಪರ್ಯಾಯ ರಸ್ತೆ ಮಾರ್ಗಗಳನ್ನು ಸೂಚಿಸಲಾಗಿದೆ.

ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರು – ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಬಸ್ ಹಾಗೂ ಇತರೇ ಪ್ರಯಾಣಿಕರು ಬೆಂಗಳೂರು-ಕನಕಪುರ-ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು- ಕುಣಿಗಲ್- ಮೈಸೂರು ಮಾರ್ಗವಾಗಿ ಪ್ರಯಾಣಿಸುವಂತೆ ರಾಮನಗರ ಜಿಲ್ಲಾ ಪೊಲೀಸರು ಸೂಚಿಸಿದ್ದಾರೆ.
ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.

ಕೆರೆ ಕೋಡಿ ಹರಿದು ಹಲವು ರಸ್ತೆಗಳು ಜಲಾವೃತಗೊಂಡಿವೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಹಲವೆಡೆ ದುಸ್ಥಿತಿಯಾಗಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗಗಳನ್ನು ಬಳಸುವಂತೆ ರಾಮನಗರ ಜಿಲ್ಲಾಡಳಿತ ಮನವಿ ಮಾಡಿದೆ.

Copyright © All rights reserved Newsnap | Newsever by AF themes.
error: Content is protected !!