November 10, 2024

Newsnap Kannada

The World at your finger tips!

Suresh Kumar

ಆಳ್ವಾಸ್ ಶಿಕ್ಷಣ ಸಂಸ್ಥೆ : ಶುಲ್ಕ ಪಾವತಿಸದ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Spread the love

ಶಾಲಾ ಶುಲ್ಕ ಸಮರಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ವಂಚಿತಳಾದ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊರಟಗೆರೆ ತಾಲೂಕಿನ ಹನುಮಂತಪುರದಲ್ಲಿ ಜರುಗಿದೆ.

ಎನ್.ಗ್ರೀಷ್ಮಾ ನಾಯಕ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಈಕೆ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕಳೆದ ವರ್ಷದ ಶಾಲಾ ಶುಲ್ಕ, ವಸತಿ, ಊಟದ ಬಿಲ್ ಬಾಕಿ ಇತ್ತು. ಇದರಿಂದ ಈ ಬಾರಿ ಶಾಲೆಗೆ ಸೇರಲು ಅವಕಾಶ ನೀಡಿಲ್ಲ.

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ನೋಂದಾಯಿಸಿ ಕೊಂಡಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿನಿ ಗ್ರೀಷ್ಮಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಈ ವಿಷಯ ತಿಳಿಯುತ್ತಿದ್ದಂತೆಯೇ ಪೋಷಕರು ಮಗಳನ್ನು ರಕ್ಷಿಸಿದ್ದಾರೆ.
9ನೇ ತರಗತಿಯಲ್ಲಿ ಗ್ರೀಷ್ಮಾ ಶೇ.96ರಷ್ಟು ಅಂಕಗಳಿಸಿದ್ದಳು.

ಇಷ್ಟೊಂದು ಪ್ರತಿಭಾವಂತ ವಿದ್ಯಾರ್ಥಿನಿ ಶುಲ್ಕ ಪಾವತಿಸದ ಕಾರಣ ಎ.ಎಸ್.ಎಲ್.ಸಿ ಪರೀಕ್ಷೆಗೆ ಅವಕಾಶ ನೀಡಿಲ್ಲ. ವಿಷಯ ತಿಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ್ದಾರೆ. ಬರುವ ಆಗಸ್ಟ್ ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!