ಪತ್ರಕರ್ತರಿಗೆ ಸದಾ ನೆರವು ಮತ್ತು ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿದಾಗ, ನನ್ನ ಗಮನಕ್ಕೆ ತಂದದ್ದನ್ನು ಕೂಡಲೇ ಮಂಜೂರು ಮಾಡಿಕೊಟ್ಟಿದ್ದು, ಮುಂದೆಯೂ ಮಾಡಿಕೊಡುವುದಾಗಿ ತಿಳಿಸಿದರು.
ಬಜೆಟ್ ನಲ್ಲಿ ಹಿಂದುಳಿದ ವರ್ಗಗಳಿಗೆ ಮಾಧ್ಯಮ ಕಿಟ್ ನೀಡುವುದು, ಪ್ರಾದೇಶಿಕ ಪತ್ರಿಕೆಗಳಿಗೆ ಉತ್ತೇಜನ ಸೇರಿದಂತೆ ಎರಡು ಬೇಡಿಕೆ ಈಡೇರಿಸಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿತು.
ಇನ್ನುಳಿದ ಬೇಡಿಕೆಗಳಿಗೆ ಪೂರಕ ಬಜೆಟ್ ನಲ್ಲಿ ಆದ್ಯತೆ ನೀಡಬೇಕು ಎಂದು ನಿಯೋಗ ಮನವಿ ಮಾಡಿತು.
ಪತ್ರಕರ್ತರ ಕ್ಷೇಮ ನಿಧಿಗೆ ಕನಿಷ್ಠ 100 ಕೋಟಿ ರೂ ಮೀಸಲಿಡಬೇಕು ಎಂದು
ಕಲಬುರಗಿಯಲ್ಲಿ ನಡೆದ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನಿರ್ಣಯ ತೆಗೆದುಕೊಂಡಿದ್ದನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ನೆನಪಿಸಲಾಯಿತು. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್,
ವಾರ್ತಾ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಹಾಜರಿದ್ದರು.
ಸಿಎಂ ಭೇಟಿ ಮಾಡಿದ ನಿಯೋಗದಲ್ಲಿ ಹಿರಿಯ ಪತ್ರಕರ್ತರಾದ ವೆಂಕಟಸಿಂಗ್, ಶಂಕರ ಪಾಗೋಜಿ, ಶ್ರೀಕಾಂತ್ ಶೇಷಾದ್ರಿ ಮತ್ತಿತರರು ಇದ್ದರು.
ರಾಯಚೂರಿನ ಪತ್ರಕರ್ತನಿಗೆ ಪರಿಹಾರ ಮಂಜೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ರಾಯಚೂರು ಜಿಲ್ಲೆಯ ಲಿಂಗಸೂರು ಪತ್ರಕರ್ತ
ನಾಗರಾಜ ಮಸ್ಕಿ ಅವರಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಪ್ಪತ್ತು ಸಾವಿರ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಉದಯವಾಣಿ, ಈ ನಮ್ಮ ಕನ್ನಡ ನಾಡು ಪತ್ರಿಕೆಯಲ್ಲಿ ಪತ್ರಕರ್ತನಾಗಿ ಕೆಲಸ ಮಾಡಿದ್ದ ನಾಗರಾಜ ಮಸ್ಕಿ ಅವರು ಹೃದ್ರೋಗ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಒಂದೂವರೆ ಲಕ್ಷ ಖರ್ಚು ಮಾಡಿಕೊಂಡಿದ್ದರು. ಅವರು ಸಂಕಷ್ಟದಲ್ಲಿರುವ ಬಗ್ಗೆ ರಾಯಚೂರು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು
ಮಾಡಿದ್ದಾರೆ.
ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆಗಳನ್ನು ಸಲ್ಲಿಸಿದೆ.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
More Stories
ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ