ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಬಲಿದಾನ ನೀಡಿದ್ದಾರೆ . ಭಾರತ ದೇಶದಲ್ಲಿ ಇಂದು ನಾವು ಸುಖವಾಗಿ ಜೀವನ ನಡೆಸುತ್ತಿರುವುದಕ್ಕೆ ಸ್ವಾತಂತ್ರ್ಯ ಹೋರಾಟಗಾರರೇ ಕಾರಣ. ನಾವು ಸದಾ ಅವರನ್ನು ಸ್ಮರಿಸಬೇಕು ಎಂದು ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ತಿಳಿಸಿದರು.
ರಾಮನಗರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ, ಸ್ವಾತಂತ್ರೋತ್ಸವದ 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ಮುಂದಿನ 75 ವಾರಗಳ ಕಾಲ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಆಚರಿಸಲಾಗುವುದು. ಎಲ್ಲರೂ ಸಂಭ್ರಮದಿಂದ ಪಾಲ್ಗೊಳ್ಳುವಂತೆ ತಿಳಿಸಿದರು.
ಪ್ರಜಾಪ್ರಭುತ್ವವನ್ನು ಸ್ವಾತಂತ್ರ್ಯ ಬಂದ ನಂತರ ಪಡೆದುಕೊಂಡಿದ್ದೇವೆ. ದೇಶಕ್ಕೆ ಬಂದಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಸಮೃದ್ಧ ಭಾರತವನ್ನು ನಿರ್ಮಾಣಗೊಳಿಸಲು ಪ್ರತಿಯೊಬ್ಬರು ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ:ರಾಕೇಶ್ ಕುಮಾರ್. ಕೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಉಮೇಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ