February 20, 2026

Newsnap Kannada

The World at your finger tips!

girl1

ಪ್ರೇಮಿಗಳಲ್ಲಿ ವೈಮನಸ್ಸು – ಯುವತಿ ಆತ್ಮಹತ್ಯೆ

Spread the love

ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗಿ ಯುವತಿ ನೇಣಿಗೆ ಶರಣಾಗಿರುವ ಘಟನೆ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ನಾಗಲಿಂಗ ಮಹಾದೇವಿ ಎಂಬುವವರ ಪುತ್ರಿ ಸೋನಿಕಾ ( 17) ಆತ್ಮಹತ್ಯೆಗೆ ಶರಣಾದ ಯುವತಿ.

ಮೃತ ಯುವತಿ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು.

ಸೋನಿಕಾ ಹಾಗೂ ಅದೇ ಗ್ರಾಮದ ಮಹದೇವು ಎಂಬುವವರ ಪುತ್ರ ಮಂಜಪ್ಪಗೌಡ ಕಳೆದ 1 ವರ್ಷ ಗಳಿಂದಲೂ ಪ್ರೀತಿಸುತ್ತಿದ್ದರೆನ್ನಲಾಗಿದೆ. ಶುಕ್ರವಾರ ರಾತ್ರಿ ಸೋನಿಕಾ ಮೊಬೈಲ್ ಗೆ ಕರೆ ಮಾಡಿದ ಪ್ರೇಮಿ ಮಾತುಕತೆ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬೆದರಿಕೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಮೃತ ಯುವತಿ ತಂದೆ ನಾಗಲಿಂಗ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಶವವನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.

ಮದ್ದೂರು ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!