ಐಟಿ ದಾಳಿಗೆ ಒಳಗಾಗಿದ್ದ ಕೋಟಿವೀರ ಅಂಬಿಕಾಪತಿ ಹೃದಯಾಘಾತದಿಂದ ನಿಧನ

Team Newsnap
1 Min Read
  • ಮಾಜಿ ಕಾರ್ಪೊರೇಟರ್ ಪತಿ ಅಂಬಿಕಾಪತಿ ಸಾವು
  • ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವ
  • ಕಳೆದ ಕೆಲ ದಿನಗಳ ಹಿಂದೆ ಐಟಿ ದಾಳಿ ನಡೆದಿತ್ತು

ಬೆಂಗಳೂರು : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹೃದಯಾಘಾತದಿಂದ ಸೋಮವಾರ ಸಂಜೆ ನಿಧನರಾದರು.

ಆರ್.ಅಂಬಿಕಾಪತಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಂಜೆ 6:40ಕ್ಕೆ ಆರ್.ಅಂಬಿಕಾಪತಿ ಸಾವನ್ನಪ್ಪಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ 42 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗದು ಪತ್ತೆಯಾಗಿತ್ತು. ಇದನ್ನು ಓದು – ಎಲ್‌.ಕೆ. ಅತೀಕ್‌ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ

ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆತ್ಮನಾಂದ ಲೇಔಟ್‍ನಲ್ಲಿರುವ ಆರ್. ಅಂಬಿಕಾಪತಿ ಸಂಬಂಧಿ ಪ್ರದೀಪ್ ಎಂಬುವರ ನಿವಾಸದಲ್ಲಿ 23 ಕರ್ಟನ್ ಬಾಕ್ಸ್‍ಗಳಲ್ಲಿ 500 ರೂ. ಮುಖಬೆಲೆಯ ಒಟ್ಟು 42 ಕೋಟಿ ರೂ.ಹಣ ಪತ್ತೆಯಾಗಿತ್ತು.

ಈ ಬೆನ್ನಲ್ಲೇ ಸುಲ್ತಾನ್ ಪಾಳ್ಯ, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ವಿವಿಧೆಡೆ ಆರ್.ಅಂಬಿಕಾಪತಿ ಸೇರಿದ ನಿವಾಸ, ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. ತನಿಖೆ ಒತ್ತಡಕ್ಕೆ ಸಿಲುಕಿ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ.

ಐಟಿ ದಾಳಿಗೆ ಒಳಗಾಗಿದ್ದ ಕೋಟಿವೀರ ಅಂಬಿಕಾಪತಿ ಹೃದಯಾಘಾತದಿಂದ ನಿಧನ – Ambikapathy, who was raided by IT, died due to heart attack #karnataka

Share This Article
Leave a comment