ಭಾರತದ ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರೊಬ್ಬರನ್ನು ಗುರಿಯಾಗಿ ಇಟ್ಟುಕೊಂಡು ಭಾರತದಲ್ಲಿ ಸ್ಫೋಟ ನಡೆಸಲು ಹೊಂಚು ಹಾಕಿದ್ದ ಐಸಿಸ್ ಉಗ್ರನನ್ನು ರಷ್ಯಾದ ಭದ್ರತಾ ಪಡೆಗಳು ಬಂಧಿಸಿವೆ.
ಈ ಬಗ್ಗೆ ಸ್ವತಃ ರಷ್ಯಾವೇ ಅಧಿಕೃತವಾಗಿ ಮಾಹಿತಿ ನೀಡಿ ಭಾರತದಲ್ಲಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವನ್ನು ಭಾರತದ ಸ್ನೇಹಿತ ರಷ್ಯಾ ತಡೆದಂತಾಗಿದೆ.
ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ ಸೋಮವಾರ ಐಸಿಸ್ ಉಗ್ರನ ಬಗ್ಗೆ ಮಾಹಿತಿಯನ್ನು ನೀಡಿದೆ. ಅಝಾಮೌ ಈ ಉಗ್ರ ಮೂಲತಃ ಟರ್ಕಿಯವನು, ಅಲ್ಲೇ ಐಸಿಸ್ ಅನ್ನು ಕೂಡ ಈತ ಸೇರಿಕೊಂಡಿದ್ದಾನೆ . ಈತನಿಗೆ ಭಾರತದ ಆಡಳಿತಾರೂಢ ಪಕ್ಷದ ಹಿರಿಯ ಮುಖಂಡರನ್ನು ಟಾರ್ಗೆಟ್ ಮಾಡಲು ಐಸಿಸ್ ಟಾರ್ಗೆಟ್ ನೀಡಿತ್ತು.
ಅದರಂತೆ ಈತ ಭಾರತದಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡು, ಅನಾಹುತ ಮಾಡಲು ತಯಾರಿ ನಡೆಸಿದ್ದನಂತೆ. ಈ ಬಗ್ಗೆ ಗುಪ್ತಚರ ಮಾಹಿತಿ ಪಡೆದುಕೊಂಡು ರಷ್ಯಾ ಈ ಉಗ್ರನನ್ನು ಬಂಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ