ರಾಜ್ಯದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್ – BSY

Team Newsnap
1 Min Read
  • ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು
  • ನಾಲ್ಕು ಲೋಕಸಭಾ ಸ್ಥಾನಗಳನ್ನು ಬಿಟ್ಟು ಕೊಡಲು ಶಾ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಕಾ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ತಿಳಿಸಿದರು

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ ವೈ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ, ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದರು.

ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ. 

ರಾಜ್ಯ ಸರ್ಕಾರದ ವಿರುದ್ದ ಒಗ್ಗಟ್ಟಿನ ಹೋರಾಟ :

ರಾಜ್ಯದಲ್ಲಿ ಜನ ವಿರೋಧಿ ಕಾಂಗ್ರೆಸ್ ಸರ್ಕಾರ ವಿರುದ್ಧ ಪ್ರಬಲವಾಗಿ ಹೋರಾಡಲು ವಿಪಕ್ಷಗಳ ಮಧ್ಯೆ ಮೈತ್ರಿ ಬಹಳ ಮುಖ್ಯವಾಗಿದೆ. ನಾವು ಒಗ್ಗಟ್ಟಾಗಿ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ದೇವೇಗೌಡ – ಶಾ ಭೇಟಿ :

ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ಲೋಕಸಭೆ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಬೆಂಗಳೂರು – ಮೈಸೂರು – ಮಂಗಳೂರು ರೈಲು ಮುರುಡೇಶ್ವರದವರೆಗೂ ವಿಸ್ತರಣೆ

ಇತ್ತೀಚೆಗೆ ಪ್ರಜ್ವಲ್ ರೇವಣ್ಣ  ಅವರ ಕೋರ್ಟ್ ಕೇಸ್ ಗೆ ಸಂಬಂಧಿಸಿದಂತೆ ವಕೀಲರ ಭೇಟಿಗೆ ದೆಹಲಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

Share This Article
Leave a comment