ಕೇಂದ್ರ ಗೃಹ ಸಚಿವ ಹಾಗೂ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರನ್ನು ರಾಜ್ಯ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ನವದೆಹಲಿಯಲ್ಲಿ ಶನಿವಾರ ಸಂಜೆ 7 ರ ವೇಳೆಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
ಬರುವ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ರಾಜ್ಯದಲ್ಲಿ ಏರ್ಪಡಿಸಲು ಉದ್ದೇಶಿಸಿರುವ ಕರ್ನಾಟಕ ರಾಜ್ಯ ಮಟ್ಟದ ಸಹಕಾರ ಸಮ್ಮೇಳನಕ್ಕೆ ಆಗಮಿಸುವಂತೆ ಶಾ ಅವರನ್ನು ಆಹ್ವಾನಿಸಿದರು. “ಸಹಕಾರ್ ಸೇ ಸಮೃದ್ಧಿ’ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳುತ್ತಿರುವ ಈ ಕಾರ್ಯಕ್ರಮದಲ್ಲಿ ಸಹಕಾರ ಇಲಾಖೆಗೆ ಹೊಸ ರೂಪ ನೀಡುವುದು ಮತ್ತು ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶವಿದೆ ಎಂದು ವಿವರಿಸಿದರು.
ಸಹಕಾರ ಇಲಾಖೆ ಆಧುನೀಕರಣಕ್ಕೆ 5 ಸಾವಿರಕೋಟಿರೂ. ಅನುದಾನ ಬಿಡುಗಡೆ ಮಾಡುವಂತೆ ಇದೇ ಸಂದರ್ಭದಲ್ಲಿ ಸಚಿವರು ಕೋರಿದರು. ಇದಕ್ಕೆ ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದರು.
ಈ ಭೇಟಿ ವೇಳೆ ಕರ್ನಾಟಕ ಸೌಹಾರ್ದ ಒಕ್ಕೂಟದ ಅಧ್ಯಕ್ಷ ಕೃಷ್ಣರೆಡ್ಡಿ, ಸಹಕಾರ ಭಾರತೀಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ, ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಸಿ.ಪಿ. ಉಮೇಶ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ