ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah ) ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆ ಇಂದು ಮೈಸೂರಿಗೆ ಆಗಮಿಸಲಿದ್ದಾರೆ.
ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅವರು, ನಗರದ ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಚಾಮುಂಡಿಬೆಟ್ಟಕ್ಕೆ ನಾಳೆ ಬೆಳಗ್ಗೆ 11 ಗಂಟೆಗೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ನಂತರ ಹೆಲಿಕಾಪ್ಟರ್ ಮೂಲಕ 11.45ಕ್ಕೆ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳೆಸಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಸುತ್ತೂರು ಮಠದಲ್ಲಿ ಮಧ್ಯಾಹ್ನ 1.30ಕ್ಕೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2.30ಕ್ಕೆ ಖಾಸಗಿ ಹೋಟೆಲ್‌ಗೆ ಆಗಮಿಸಲಿದ್ದಾರೆ.
ಇದನ್ನು ಓದಿ – ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ : 1 ಕೆಜಿಗೆ 500 ರೂ
ಮೈಸೂರು ಕ್ಲಸ್ಟರ್ ಗೆ ಬರುವ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳ ಸಿದ್ಧತೆ ಬಗ್ಗೆ ಸಂಜೆ 3.30 ರಿಂದ 4.30ರ ತನಕ ಮಹತ್ವದ ಸಭೆ ನಡೆಸಲಿದ್ದಾರೆ .
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ