ರಾಜ್ಯಕ್ಎ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ತಂಗಿದ್ದಾರೆ. ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ನಿನ್ನೆಯೇ ಯಡಿಯೂರಪ್ಪ ಅವರನ್ನು ಭೇಟಿಯಾಗುವ ಬಗ್ಗೆ ಅಮಿತ್ ಶಾ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ.ಇದನ್ನು ಓದಿ –ಆಶ್ಲೇಷ ಮಳೆಯ ಅಬ್ಬರ : ಮಂಡ್ಯ ಸೇರಿದಂತೆ ಜಿಲ್ಲೆಗಳಲ್ಲಿ ಭಾರಿ ಅವಾಂತರ
ಇಂದು ಹೋಟೆಲ್ ಗೆ ತೆರಳಿದ್ದ ಯಡಿಯೂರಪ್ಪ, ಅವರೊಂದಿಗೆ ಉಪಹಾರ ಸೇವಿಸುವುದರ ಜೊತೆಗೆ 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಇತ್ತೀಚೆಗಷ್ಟೇ ಯಡಿಯೂರಪ್ಪ ತಮ್ಮ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಕಣಕ್ಕಿಳಿಯುವುದಾಗಿ ತಿಳಿಸಿದ್ದರು.
ಅವರ ಈ ದಿಢೀರ್ ಹೇಳಿಕೆ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದರ ಮಧ್ಯೆ, ಇಂದು ಅಮಿತ್ ಶಾ ಹಾಗೂ ಯಡಿಯೂರಪ್ಪ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ