October 7, 2022

Newsnap Kannada

The World at your finger tips!

shira acci

ಕಾರಿಗೆ ಅಪರಿಚಿತ ವಾಹನ ಡಿಕ್ಕಿ- ತಂದೆ, ಮಗಳು ಸೇರಿ ಮೂವರ ಸಾವು

Spread the love

ಅಪರಿಚಿತ ವಾಹನ ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ತಂದೆ, ಮಗಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ಕಳೆದ ರಾತ್ರಿ ಸಂಭವಿಸಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರ್ ಗೇಟ್ ಬಳಿ ಕಳೆದ ರಾತ್ರಿ ಭೀಕರ ದುರಂತ ಸಂಭವಿಸಿದೆ.

ತುಮಕೂರಿನ ಕಡೆಗೆ ತೆರಳುತಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಡವಿಗೆರೆ ಗ್ರಾಮದ ಚಾಲಕ ಅವಿನಾಶ (28), ಮಗಳು ಪ್ರಣಂತಿ (5) ಹಾಗೂ 4 ವರ್ಷದ ಸೌಮ್ಯ ಸಾವನ್ನಪ್ಪಿದ್ದಾರೆ.

ಸೌಮ್ಯ ಅವಿನಾಶ್ ಸಂಬಂಧಿಕರ ಮಗಳು, ಕಾರಿನಲ್ಲಿ ಸಂಬಂಧಿಕರ ಮನೆಗೆ ತೆರಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

error: Content is protected !!