ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ಮಾಡಿ ಚರ್ಚೆ ನಡೆಸಿದ ಬಳಿಕ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಸಚಿವ ಆನಂದ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿರುವ ಬೊಮ್ಮಾಯಿ ಅವರು, ಸಚಿವರ ಮನವೊಲಿಕೆಗೆ ಮಾಡಲು ಯಶಸ್ವಿಯಾಗಿದ್ದಾರೆ.
ಸಿಎಂ ನಾಳೆ ದೆಹಲಿಗೆ ಭೇಟಿ ನೀಡಿದ ವೇಳೆ ಹೈಕಮಾಂಡ್ನೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಈ ನಡುವೆ ಸಿಎಂ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆನಂದ್ ಸಿಂಗ್, ನಾನು ಸಿಎಂ ಭೇಟಿ ಮಾಡಿದ್ದೆ. ನನ್ನ ನಿಲುವನ್ನು ಮತ್ತೊಮ್ಮೆ ಸಿಎಂ ಗಮನಕ್ಕೆ ತಂದಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ನನ್ನ ಭಾವನಗೆಳಿಗೆ ಸಿಎಂ ಸ್ಪಂಧಿಸಲಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರನ್ನ ಸಹ ಭೇಟಿ ಮಾಡಿದ್ದೆ, ಅವರೂ ಸಹ ಮೊದಲು ಅಧಿಕಾರ ವಹಿಸಿಕೊಳ್ಳುವಂತೆ ಹೇಳಿದ್ದಾರೆ. ನನ್ನ ಮನವಿಯನ್ನೂ ಅವರ ಗಮನಕ್ಕೂ ತಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ