January 10, 2025

Newsnap Kannada

The World at your finger tips!

muraga durga

ಮತ್ತು ಬರಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಮುರುಘಾ ಶರಣರ ವಿರುದ್ಧ ದೂರು

Spread the love

ಇದೊಂದು ಗಂಭೀರ ಆರೋಪ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ, ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದೆ, ಅಲ್ಲಿ ನ್ಯಾಯ ಸಿಗುವ ವಿಶ್ವಾಸ ಇಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದಾರೆ.

ಸಂಸ್ಥೆಗೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರುವುದರಿಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು.

ಈಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆದರಿಸಿ ನಜರಬಾದ್ ಠಾಣೆಯಲ್ಲಿ ದಾಖಲಿಸಿದ್ದಾರೆ

ಈ ಘಟನೆಯು ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಎಲ್ಲಾ ಪ್ರಕರಣಗಳನ್ನು ಆ ಜಿಲ್ಲೆಗೆ ವರ್ಗಾಯಿಸುವ ಸಾಧ್ಯತೆ ಇದೆ.

ದೂರು ಏನು?

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು.

ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡರ್ ಅವರೇ ನಮ್ಮನ್ನು ಕಳಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು.

ತಮ್ಮ ಅನುಭವಗಳನ್ನು ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರು ದೂರು ನೀಡಲು ಮಂದೆ ಬರಲಿಲ್ಲ. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಮೈಸೂರಿನ ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಸಮಗ್ರ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಎಚ್ ಟಿ ಕಮಲಾ ಅವರು ರಜೆ ಇದ್ದುದರಿಂದ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾ ಕುಮಾರಿ ವಿಚಾರಣೆ ನಡೆಸಿದರು.

Copyright © All rights reserved Newsnap | Newsever by AF themes.
error: Content is protected !!