February 21, 2026

Newsnap Kannada

The World at your finger tips!

anna malai

ಹಿಂದಿ ಹೇರಿಕೆ- ಅಮಿತ್‌ ಶಾ ಹೇಳಿಕೆಗೆ TN ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರೋಧ

Spread the love

ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಬಳಸಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರೋಧ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅಣ್ಣಾ ಮಲೈ ತಮಿಳುನಾಡು ಬಿಜೆಪಿ ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ತಮಿಳು ಸಂಪರ್ಕ ಭಾಷೆಯಾದರೆ ಪಕ್ಷಕ್ಕೆ ಹೆಮ್ಮೆಯಾಗುತ್ತದೆ ಎಂದರು.

ಹಿಂದಿ ಭಾಷೆ ಹೇರಲು ಕಾಂಗ್ರೆಸ್‌ ಯತ್ನಿಸಿದ್ದಾಗಲೂ ಅದಕ್ಕೆ ವಿರೋಧ ವ್ಯಕ್ತವಾಗಿತ್ತು ಎಂದಿದ್ದಾರೆ.

ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಎಲ್ಲಾ ರಾಜ್ಯ ಸರ್ಕಾರಗಳು ಇಂಧನದ ಮೇಲಿನ ತೆರಿಗೆಯನ್ನು ಕಡಿತಗೊಳಿಸಿವೆ. ಜನರಿಗೆ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರವನ್ನು ಕೇಳಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

error: Content is protected !!