ಇಂದು ಅನ್ನಭಾಗ್ಯ ಯೋಜನೆ ಚಾಲನೆ : ಬಿಪಿಎಲ್ ಕಾರ್ಡ್ ಅಕೌಂಟ್‍ಗೆ ರೇಷನ್ ದುಡ್ಡು .

Team Newsnap
1 Min Read

ರಾಜ್ಯ ರಾಜ್ಯ ಸರ್ಕಾರ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯಕ್ಕೆ (Anna Bhagya) ಇಂದು ಚಾಲನೆ ನೀಡಲಿದೆ.

ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್‌ದಾರರ (BPL Card) ಖಾತೆಗೆ ಹಣ ಹಾಕುವ ಮೂಲಕ ಚಾಲನೆ ಸಿಗಲಿದೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ಜುಲೈ ಒಂದರಿಂದಲೇ ಜಾರಿಯಾಗಬೇಕಿತ್ತು .

ಅಕ್ಕಿ ಸಿಗದ ಕಾರಣ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಅಕ್ಕಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು , ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ಹಣ ಸೀರಿಸಲು , ನಂತರ ಮಂಗಳವಾರ ಉಳಿದ ಜಿಲ್ಲೆಯ ಬಿಪಿಎಲ್ ಕಾರ್ಡ್‍ದಾರರಿಗೆ ಹಣ ಹಾಕಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನಿರ್ಧರಿಸಿದ್ಧಾರೆ .

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್‍ದಾರರಿರಿದ್ದು , ಶೇಕಡ 1.28 ಕೋಟಿ ಪೈಕಿ 99.9% ಆಧಾರ್ ಲಿಂಕ್ ಮತ್ತು ಬ್ಯಾಂಕ್ಖಾತೆಗೆ ಲಿಂಕ್ ಆಗಿರುವುದು. ಉಳಿದಿರುವ 6 ಲಕ್ಷ ಕಾರ್ಡ್‍ಗಳು ಆಧಾರ್ ಲಿಂಕ್ ಆಗಬೇಕಿದೆ .ಜಲಾಶಯಗಳ ಇಂದಿನ ನೀರಿನ ಮಟ್ಟ

ಪ್ರತಿ ಕೆಜಿಗೆ 34 ರೂಪಾಯಿ ಲೆಕ್ಕದಲ್ಲಿ ತಲಾ ಒಬ್ಬರಿಗೆ 5 ಕೆಜಿಗೆ 170 ರೂಪಾಯಿ ಹಣ ಹಾಕಲು ಸರ್ಕಾರ ನಿರ್ಧರಿಸಿದೆ.

Share This Article
Leave a comment