ಶೀಘ್ರದಲ್ಲೇ ಹೊಸ ವಿಮಾನ ನಿಲ್ದಾಣದ ಘೋಷಣೆ
ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ಅಗತ್ಯವಾಗಿದೆ ಎಂಬ ಹಿನ್ನಲೆಯಲ್ಲಿ, ಶೀಘ್ರದಲ್ಲೇ ಅದರ ಸ್ಥಳವನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಅವರು ಹೇಳಿದರು. ರಾಜ್ಯದ ಕೈಗಾರಿಕಾ ನೀತಿಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ ಮೂಲಸೌಕರ್ಯ ಅಭಿವೃದ್ಧಿಯ ಯೋಜನೆ ಇರಲಿದೆ.
ಕರ್ನಾಟಕ – ಜ್ಞಾನ ರಾಜಧಾನಿಯ ಕನಸು
ಕರ್ನಾಟಕವನ್ನು ಜ್ಞಾನ ರಾಜಧಾನಿಯಾಗಿ ಪರಿವರ್ತಿಸಲು ಉದ್ದೇಶಿಸಿದ್ದೇವೆ. ಮಹಾತ್ಮ ಗಾಂಧಿಯವರ ಮಾತುಗಳಂತೆ, “ನಾವು ಇಂದು ಏನು ಮಾಡುತ್ತೇವೆ ಎಂಬುದರ ಮೇಲೆ ಭವಿಷ್ಯ ಅವಲಂಬಿತವಾಗಿದೆ.” ಈ ಭವಿಷ್ಯ ನಿರ್ಮಾಣಕ್ಕೆ ನಾವು ಹೆಜ್ಜೆ ಇಡಬೇಕಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬ್ಯಾಗಲೂರು – ಹೂಡಿಕೆದಾರರ ಪರಿಪೂರ್ಣ ತಾಣ
ಬೆಂಗಳೂರಿಗೆ ಪ್ರಪಂಚದ ಹಲವಾರು ಭಾಗಗಳಿಂದ ಜನರು ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಆಗಮಿಸುತ್ತಿದ್ದಾರೆ. ನಮ್ಮ ರಾಜ್ಯ ರಾಜಧಾನಿ ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಐತಿಹಾಸಿಕವಾಗಿ ಶ್ರೀಮಂತವಾಗಿದೆ. ಕರ್ನಾಟಕವು ವಿಶ್ವದರ್ಜೆಯ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಅತ್ಯುತ್ತಮ ಎಂಜಿನಿಯರಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್, ಎಂ.ಬಿ.ಎ ಮತ್ತು ಕಾನೂನು ಕಾಲೇಜುಗಳಿವೆ. ಇಂತಹ ವಿದ್ಯಾಸಂಸ್ಥೆಗಳ ಸಂಖ್ಯೆಯಲ್ಲಿ ಬೆಂಗಳೂರು ಮುಂದಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ – ವಿಶ್ವದ ಅತ್ಯುತ್ತಮ ಟರ್ಮಿನಲ್
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ವಿಶ್ವದ ಅತ್ಯುತ್ತಮ ಹೊಸ ಟರ್ಮಿನಲ್‌ಗಳಲ್ಲಿ ಒಂದಾಗಿದ್ದು, ವರ್ಷಕ್ಕೆ 40 ಮಿಲಿಯನ್ ಗಿಂತಲೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುತ್ತಿದೆ. ಹೂಡಿಕೆದಾರರು ವಸತಿ ಹಾಗೂ ಕಚೇರಿ ಸ್ಥಳಗಳಲ್ಲಿ ಹೆಚ್ಚು ಬಂಡವಾಳ ಹೂಡಬಹುದಾದ ಸ್ಥಳವೂ ಬೆಂಗಳೂರು ಎಂದು ಅಂಕಿಅಂಶಗಳು ಸೂಚಿಸುತ್ತವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಒಡಂಬಡಿಕೆ
ಈ ಸಂಧರ್ಭದಲ್ಲಿ ಹಲವಾರು ಉದ್ಯಮಿಗಳು ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಅಂತರಾಷ್ಟ್ರೀಯ ಶಾಲೆಗಳು, ಟೆಕ್ ಪಾರ್ಕ್‌ಗಳು, 50ಕ್ಕೂ ಹೆಚ್ಚು ಫೈವ್ ಸ್ಟಾರ್ ಹೋಟೆಲ್‌ಗಳು ಸ್ಥಾಪನೆಯಾಗಿವೆ. ಬೆಂಗಳೂರನ್ನು “ಭಾರತದ ಪಬ್ ರಾಜಧಾನಿ” ಎಂದೂ ಅವರು ಕರೆದರು.
ಸಮಾರಂಭದಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದು, ಸರ್ಕಾರವು 10 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ ಹೊಂದಿರುವುದನ್ನು ಅವರು ತಿಳಿಸಿದ್ದಾರೆ.ಇದನ್ನು ಓದಿ -2025 ICC ಚಾಂಪಿಯನ್ಸ್ ಟ್ರೋಫಿ: ಟೀಮ್ ಇಂಡಿಯಾ ತಂಡ ಪ್ರಕಟ, ಬುಮ್ರಾ ಔಟ್ – ಹರ್ಷಿತ್ ರಾಣಾ ಸೇರ್ಪಡೆ
ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ, ಪೂರೈಕೆ ಸರಪಳಿಗಳ ಬಲಪಡಿಸುವುದು ಮತ್ತು ತಂತ್ರಜ್ಞಾನ ಆಧಾರಿತ ಉದ್ಯಮಗಳನ್ನು ಉತ್ತೇಜಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಅವರು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು