ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೋರ್ವ ಶಾಸಕ ಅಸಮಾಧಾನಗೊಂಡಿದ್ದಾರೆ. ರೋಹಿಣಿ ಸಿಂಧೂರಿ ಹೋದ ಕಡೆಯಲ್ಲಾ ಸರ್ಕಾರದ ವಿರುದ್ಧವೇ ನಡೆಯುವ ಪ್ರವೃತ್ತಿ ರೂಢಿಸಿಕೊಂಡಿದ್ದಾರೆ ಅಂತಾ ಶಾಸಕ ತನ್ವೀರ್ ಸೇಠ್ ಆರೋಪ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಸರ್ಕಾರವನ್ನೇ ಪ್ರಶ್ನಿಸುವ ಪ್ರವೃತ್ತಿಯನ್ನ ರೋಹಿಣಿ ಸಿಂಧೂರಿ ಬೆಳೆಸಿಕೊಂಡಿದ್ದಾರೆ ಎಂದರು. ಈ ಹಿಂದೆ ಸರ್ಕಾರದ ವಿರುದ್ಧವೇ ಕೆಎಟಿಗೆ ಹೋಗಿದ್ದರು. ಸರ್ಕಾರಿ ಸಭೆಯಲ್ಲಿ ಜನಪ್ರತಿನಿಧಿಗಳು ಮಾತನಾಡುವುದು ವೈಯಕ್ತಿಕವಲ್ಲ. ಜನರ ಸಮಸ್ಯೆಯನ್ನ ಪ್ರಸ್ತಾಪ ಮಾಡುತ್ತಾರೆ. ಶಾಸಕರಿಗೆ ಯಾವುದೇ ಸಮಸ್ಯೆಗಳಿಲ್ಲ, ಜನರ ಸಮಸ್ಯೆಗಳನ್ನಷ್ಟೇ ಪ್ರಸ್ತಾಪ ಮಾಡುತ್ತಾರೆ. ಆದ್ರೆ ಅಧಿಕಾರ ಇದೆ ಅಂತ ಪತ್ರ ಬರೆಯೋಕೆ ಆಗುತ್ತಾ? ಅಥವಾ ತಪ್ಪನ್ನ ತಿದ್ದುಕೊಳ್ಳಬೇಕಾ ಅಂತಾ ತನ್ವೀರ್ ಸೇಠ್ ಪ್ರಶ್ನೆ ಮಾಡಿದ್ದಾರೆ.
ಈಗಾಗಲೇ ರೋಹಿಣಿ ಸಿಂಧೂರಿ ವಿರುದ್ಧ ಕೆ.ಆರ್ ನಗರದ ಶಾಸಕ ಸಾರಾ ಮಹೇಶ್, ಹುಣಸೂರು ಶಾಸಕ ಮಂಜುನಾಥ್, ನಂಜನಗೂಡು ಶಾಸಕ ಹರ್ಷವರ್ಧನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕೂಡ ಸಿಂಧೂರಿ ವಿರುದ್ಧ ಬೇಸರ ಹೊರಹಾಕಿದ್ದಾರೆ.
More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ಮದ್ದೂರಿನ ಮಹಿಳೆ ಮೇಲೆ ಅತ್ಯಾಚಾರ , ಕೊಲೆ ಮಾಡಿದ್ದ ಇಬ್ಬರು ದುಷ್ಕರ್ಮಿಗಳ ಬಂಧನ