ಬೆಂಗಳೂರಲ್ಲಿ ಮತ್ತೆ ನಿಗೂಢ ಸ್ಫೋಟಕ್ಕೆ ಮೂವರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ.
ಬೆಂಗಳೂರಿನ ಚಾಮರಾಜ ಪೇಟೆಯ ನ್ಯೂ ನಗರ್ತಪೇಟೆಯಲ್ಲಿರುವ ಪತ್ರಕಾಳಿ ಲಾರಿ ಸರ್ವೀಸ್ನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ.
ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದುರ್ಘಟನೆಯು ಮಧ್ಯಾಹ್ನ 12.05 ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಇಬ್ಬರು ಉತ್ತರ ಭಾರತದವರು ಎನ್ನಲಾಗಿದೆ. ಇನ್ನು ಸ್ಫೋಟದ ತೀವ್ರತೆಗೆ 10 ವಾಹನಗಳಿಗೆ ಹಾನಿಯಾಗಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ ಅನ್ನೋ ಮಾಹಿತಿ ಸಿಕ್ಕಿದೆ.
ಘಟನೆ ಸಂಭವಿಸಿದ ಕೂಡಲೇ ವಿವಿ ಪುರಂ ಠಾಣೆ ಪೊಲೀಸರ ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ