January 24, 2022

Newsnap Kannada

The World at your finger tips!

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್: ಕೇಂದ್ರ ಸಚಿವೆ ಶೋಭಾ ಆರೋಪ

Spread the love

ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ನಿರಂತರವಾಗಿ ಭ್ರಷ್ಟಾಚಾರ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷವು ಅಧಿಕಾರದ್ದಲ್ಲಿದ್ದಾಗ ಲೂಟಿಹೊಡೆದಿದೆ ಎಂದು ದೂರಿದರು. ಮೈಸೂರಿನಲ್ಲಿ ಗುರುವಾರ ಕೇಂದ್ರ ಸಚಿವರು ವರದಿಗಾರರೊಂದಿಗೆ ಮಾತನಾಡಿದರು.


ರಸಗೊಬ್ಬರಕ್ಕೆ ಸಂಬಂಧಿಸಿದಂತೆ ಸ್ವಲ್ಪ ಸಮಸ್ಯೆ ಆಗಿದೆ. ಈ ವಿಷಯವನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಸಗೊಬ್ಬರವನ್ನು ಹೊರ ದೇಶಗಳಿಂದ ತರಿಸಿಕೊಳ್ಳಲಾಗುತ್ತಿದೆ. ದೇಶದಲ್ಲೇ ರಸಗೊಬ್ಬರ ಉತ್ಪಾದನೆ ಹೆಚ್ಚಿಸಿ, ಸ್ವಾವಲಂಬಿಯಾಗುವುದಕ್ಕೆ ಆದ್ಯತೆ ಕೊಡಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಉತ್ತರಿಸಿದರು.
ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಜರಿದರು. ಕೇಂದ್ರವು ರೈತರ ಹಿತಕ್ಕೆ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.


ಇದಕ್ಕೂ ಮುನ್ನ ಸಚಿವರು ಅರಮನೆ ಅಂಗಳದಲ್ಲಿ ಮಾವುತರು ಹಾಗೂ ಕಾವಾಡಿಗರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಪಾಲ್ಗೊಂಡಿದ್ದರು. ತಾವು 2008 ರಲ್ಲಿ ಉಸ್ತುವಾರಿ ಸಚಿವರಾಗಿದ್ದಾಗ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ಕೊಡುವುದನ್ನು ಆರಂಭಿಲಾಯಿತು. ಹಿಂದೆ ಅವರಿಗೆ ಗೌರವಧನವಾಗಿ 5 ಸಾವಿರರೂ. ನೀಡಲಾಗುತ್ತಿತ್ತು. ಆದರೆ ಈಗ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಾಗಿದೆ. ತಿಂಗಳ ಸಂಬಳವನ್ನು ಕೊಡಲಾಗುತ್ತಿದೆ ಎಂದು ಕೇಂದ್ರ ಸಚಿವರು ನುಡಿದರು.

error: Content is protected !!