ಬೆಂ- ಮೈ ಹೈವೇಯಲ್ಲಿ ಮತ್ತೆ ಭೀಕರ ಅಪಘಾತ: ಇಬ್ಬರು ಸಾವು, ಮೂವರಿಗೆ ಗಾಯ

Team Newsnap
1 Min Read

ರಾಮನಗರ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಕಾರಿಗೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯಲ್ಲಿ ಬುಧವಾರ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಲಾರಿ ಕಾರಿಗೆ ಡಿಕ್ಕಿಯಾಗಿ ಸಂಭವಿಸಿದ ಈ ಅಪಘಾತದಲ್ಲಿ 12 ವರ್ಷದ ಬಾಲಕಿ ಹಾಗೂ 20 ವರ್ಷದ ಯುವತಿ ಸಾವನ್ನಪ್ಪಿದ್ದಾರೆ.

ಹೆಚ್ ಡಿ ಕೋಟೆಯಲ್ಲಿ ಮದುವೆ ಮುಗಿಸಿಕೊಂಡು ಒಂದೇ ಕುಟುಂಬದ 6 ಮಂದಿ ತೆರಳುತ್ತಿದ್ದರು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯ ದೇವರಹೊಸಳ್ಳಿಯ ಬಳಿಯಲ್ಲಿ ಲಾರಿ, ಕಾರಿಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ನಾಳೆ CET-2023ರ ಫಲಿತಾಂಶ ಪ್ರಕಟ

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment