ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಘೋಟಗೊಂಡ ಬೆನ್ನಲ್ಲೇ ಇದೀಗ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.
ಬಿಜೆಪಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಇಂದು ಮಧ್ಯಾಹ್ನ ಸಭಾಪತಿ ಹೊರಟ್ಟಿ ಭೇಟಿಯಾಗಿ ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೆನೆ. ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂದು ಮಧ್ಯಾಹ್ನ ತಿಳಿಸುವೆ ಎಂದು ಹೇಳಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಹರಿಹಾಯುತ್ತಲೇ ಬಂದಿದ್ದರು. ಪಕ್ಷೇತರರಾಗಿ ಸ್ಪರ್ಧಿಸುವುದಾಗಿಯೂ ಹೇಳಿಕೊಂಡಿದ್ದರು. ಈಶ್ವರಪ್ಪಗೆ ಟಿಕೆಟ್ ನಿರಾಕರಣೆ ಬಳಿಕವೂ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು