Main News

ಎಪಿಎಂಸಿ ಬಂಡವಾಳಶಾಹಿಗಳಿಗೆ ಅಡ ಇಡುವ ಸರ್ಕಾರ- ಸುರ್ಜೇವಾಲಾ

ಬಂಡವಾಳಶಾಹಿ‌ ತಮ್ಮ ಸ್ನೇಹಿತರಿಗೆ ಎಪಿಎಂಸಿಯನ್ನೇ ಅಡವಿಡಲು ರಾಜ್ಯ ಸರ್ಕಾರ ಹೊರಟಿದೆ. ರಾಜ್ಯ ಸರ್ಕಾರವು ಭೂ ಸುಧಾರಣೆಯ ತಿದ್ದುಪಡಿ ಕಾಯ್ದೆಯ ಮೂಲಕ ಬಡ ರೈತರ ಜಮೀನನ್ನು ಕಸಿದುಕೊಂಡು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ನೀಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶನಿವಾರ ಹೇಳಿದರು.

ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಬೃಹತ್ ರೈತ ಧ್ವನಿ ಸಮಾವೇಶದಲ್ಲಿ ಮಾತನಾಡಿದ ರಣದೀಪ್ ‘ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದ ರೈತರ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರ ಜಾರಿಗೆ ತರಲಿರುವ ಕೃಷಿ‌ ಮಸೂದೆಗಳು ರೈತರಿಗೆ ಮರಣಶಾಸನವಾಗಿವೆ. ಕೃಷಿ‌ ಮಸೂದೆಗಳಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆಯೂ ಸಿಗುವದಿಲ್ಲ. ರೈತರಿಗೆ ಬೆಂಬಲ ಬೆಲೆಯನ್ನು ನೀಡುವವರಾರು? ಈ ಸರ್ಕಾರವು ರೈತರ ಜೀವನವನ್ನು ಹಾಳು ಮಾಡುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಕಬ್ಬು ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದರು. ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಧೋರಣೆಗಳು ರೈತರ ಮೇಲೆ, ದಿನ‌ನಿತ್ಯದ ಆಹಾರದ ಮೇಲೆ ಆಕ್ರಮಣ ಮಾಡುತ್ತಿವೆ’ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕೃಷಿ‌ ಮಸೂದೆಗಳು ಜನ ವಿರೋಧಿಯಾಗಿವೆ. ಯಾವುದೇ ಕಾರಣಕ್ಕೂ ನಾವು ಜಾರಿಯಾಗಲು ಬಿಡುವದಿಲ್ಲ. ಹಾಗಾಗಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕಿದೆ. ಇಂದಿನ ಸಮಾವೇಶ ನಿಮ್ಮ ಧ್ವನಿಯಾಗಿ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಬೇಕು’ ಎಂದರು.

ಸಮಾವೇಶದಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ. ಎನ್ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಮತ್ತಿತರು ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024