ವಿಧಾನ ಸಭೆ ಚುನಾವಣೆ ಹಿನ್ನೆಲೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಂಸದೆ ಬಿಜೆಪಿ ಅಭ್ಯರ್ಥಿ ಸುಧಾ ಪರ ಸುಮಲತಾ ಅಂಬರೀಶ್ ಭರ್ಜರಿ ಪ್ರಚಾರ ಮಾಡಿದ್ದಾರೆ, ಈ ವೇಳೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಷಮೆಯಾಚಿಸಿದ್ದಾರೆ.
ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರವಾಗಿದ್ರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಬಿಜೆಪಿಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ.
ಅಂಬರೀಶ್ ನಿಧನದ ಬಳಿಕ ಕಾಂಗ್ರೆಸ್ನಲ್ಲಿ ನನಗೆ ಅವಕಾಶ ಸಿಗಲಿಲ್ಲ. ನನ್ನ ಗೆಲುವಿಗೆ ಬಿಜೆಪಿ, ಕಾಂಗ್ರೆಸ್, ರೈತ ಸಂಘ ಕಾರಣ, ಬದಲಾದ ಕಾಲದಲ್ಲಿ ರಾಜಕೀಯ ತೀರ್ಮಾನವನ್ನು ಕೈಗೊಳ್ಳಬೇಕಾಯ್ತು. ಈ ಕಾರಣದಿಂದಾಗಿ ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡೆ ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರವಾಗಿದ್ರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು