ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರವಾಗಿದ್ರೆ ಕ್ಷಮೆ ಇರಲಿ – ಸುಮಲತಾ ಅಂಬರೀಶ್‌

Team Newsnap
1 Min Read
Apologies to congress workers - Sumalata Ambarish ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರವಾಗಿದ್ರೆ ಕ್ಷಮೆ ಇರಲಿ - ಸುಮಲತಾ ಅಂಬರೀಶ್‌

ವಿಧಾನ ಸಭೆ ಚುನಾವಣೆ ಹಿನ್ನೆಲೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಂಸದೆ ಬಿಜೆಪಿ ಅಭ್ಯರ್ಥಿ ಸುಧಾ ಪರ ಸುಮಲತಾ ಅಂಬರೀಶ್ ಭರ್ಜರಿ ಪ್ರಚಾರ ಮಾಡಿದ್ದಾರೆ, ಈ ವೇಳೆ ಜಿಲ್ಲೆಯ ಕಾಂಗ್ರೆಸ್​ ಕಾರ್ಯಕರ್ತರಿಗೆ ಕ್ಷಮೆಯಾಚಿಸಿದ್ದಾರೆ.

ನನ್ನ ನಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಬೇಸರವಾಗಿದ್ರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ಬಿಜೆಪಿಗೆ ಬೆಂಬಲ ನೀಡಿದ ವಿಚಾರವಾಗಿ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಬೇಸರ ತರಿಸಿದ್ರೆ, ನೋವುಂಟು ಮಾಡಿದ್ರೆ ಕ್ಷಮೆಯಾಚಿಸುತ್ತೇನೆ. ಆದರೆ ನಿಮ್ಮ ನಾಯಕರ ನಡೆಗೆ ನಾನು ಹೊಣೆ ಅಲ್ಲ ಎಂದು ಭಾವುಕವಾಗಿ ಮಾತನಾಡಿದ್ದಾರೆ.

ಅಂಬರೀಶ್​​ ನಿಧನದ ಬಳಿಕ ಕಾಂಗ್ರೆಸ್​ನಲ್ಲಿ ನನಗೆ ಅವಕಾಶ ಸಿಗಲಿಲ್ಲ. ನನ್ನ ಗೆಲುವಿಗೆ ಬಿಜೆಪಿ, ಕಾಂಗ್ರೆಸ್, ರೈತ ಸಂಘ ಕಾರಣ, ಬದಲಾದ ಕಾಲದಲ್ಲಿ ರಾಜಕೀಯ ತೀರ್ಮಾನವನ್ನು ಕೈಗೊಳ್ಳಬೇಕಾಯ್ತು. ಈ ಕಾರಣದಿಂದಾಗಿ ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡೆ ನನ್ನ ನಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಬೇಸರವಾಗಿದ್ರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಸುಮಲತಾ ಅಂಬರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

Share This Article
Leave a comment