ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವಂತಿಲ್ಲ: ಸುನಿಲ್ ಕುಮಾರ್

Team Newsnap
1 Min Read

ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಈ ವಿಷಯವನ್ನು ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಿ ಈ ವಿಷಯವನ್ನು ಪ್ರಕಟಿಸಿದರು.

ಪ್ರಶಸ್ತಿಗಾಗಿ ನಾವು ಎಂದು ಹುಡುಕಿಕೊಂಡು ಹೋಗಬಾರದು, ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾಧಕರ ಆಯ್ಕೆ ನಡೆಯಲಿದೆ ಎಂದು ಹೇಳಿದರು.

ನಾಡಿನೆಲ್ಲಡೆ ನೀರಿಗಾಗಿ ಗಲಾಟೆ, ಸಂಘರ್ಷ, ನ್ಯಾಯಾಲಯದ ಮೆಟ್ಟಿಲೇರುವ ಈ ಸಂದರ್ಭದಲ್ಲಿ ಮಹಾಲಿಂಗ ನಾಯ್ಕರ ಸಾಧನೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ. ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ದೇಶದ ಜನರನ್ನು ಕಣ್ತೆರೆಸುವಲ್ಲಿ ಈ ಪ್ರಶಸ್ತಿ ಅರ್ಹವಾಗಿಯೇ ಮಹಾಲಿಂಗ ನಾಯ್ಕರನ್ನು ಹುಡುಕಿಕೊಂಡು ಬಂದಿದೆ ಎಂದರು.

Share This Article
Leave a comment