ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡದ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ ಆಸಕ್ತರು ಅರ್ಜಿ ಸಲ್ಲಿಸಬವುದು ಸ್ಥಳೀಯರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿರುತ್ತದೆ.
ಈ ಜಿಲ್ಲೆಯನ್ನು ಹೊರತುಪಡಿಸಿ ಇತರೆ ಜಿಲ್ಲೆಯವರು ನಿಮ್ಮ ಜಿಲ್ಲೆಯಲ್ಲಿ ಇರುವ ಖಾಲಿ ಹುದ್ದೆಯ ಮಾಹಿತಿಯನ್ನು ಪಡೆಯಲು ಒಮ್ಮೆ ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಭೇಟಿ ಮಾಡಬೇಕು. ಅಥವಾ ಈ ಕೆಳಗೆ ತಿಳಿಸಿರುವ ವಿಧಾನ ಅನುಸರಿಸಿ ನಿಮ್ಮ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ ಪಡೆದು ಒಮ್ಮೆ ವಿಚಾರಿಸಿ ಮಾಹಿತಿ ತಿಳಿದುಕೊಳ್ಳಬವುದು.
ಅಂಗನವಾಡಿ ಸಹಾಯಕಿಯಾಗಿ ಕೆಲಸ ನಿರ್ವಹಿಸಲು ಆಸಕ್ತಿಯಿರುವವರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದುಕೊಂಡು, 29 ಸೆಪ್ಟೆಂಬರ್ 2023ರ ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬವುದು.
ಇಲಾಖೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
ಹುದ್ದೆ | ಅಂಗನವಾಡಿ ಸಹಾಯಕಿಯರ |
ಗೌರವಧನ | ₹10,000 ರೂ |
ಒಟ್ಟು ಹುದ್ದೆಗಳು | 113 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 29 ಸೆಪ್ಟೆಂಬರ್ 2023 |
ಇಲಾಖೆ ವೆಬ್ಸೈಟ್ | dwcd.karnataka.gov.in |
ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ : 0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ನಿಮ್ಮ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವಿಳಾಸ ಮತು ಮೊಬೈಲ್ ಸಂಖ್ಯೆಯನ್ನು ಪಡೆಯುವುದು ಹೇಗೆ?
ಸಾರ್ವಜನಿಕರು ನಿಮ್ಮ ತಾಲ್ಲೂಕಿನಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಎಲ್ಲಿದೆ ಮತ್ತು ಅದರಲ್ಲಿ ಕಾರ್ಯನಿರ್ವಹಿಸಲು ಯೋಜನಾಧಿಕಾರಿರವರ ದೂರವಾಣಿ ಸಂಖ್ಯೆಯನ್ನು ಸರಕಾರದ ಈ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಸಂಪೂರ್ಣ ವಿವರವನ್ನು ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದಾಗಿದೆ.
Step-1: ಮೊದಲಿಗೆ https://mahitikanaja.karnataka.gov.in ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ರಾಜ್ಯ ಸರಕಾರದ ಮಾಹಿತಿ ಕಣಜ ಜಾಲತಾಣ ಭೇಟಿ ಮಾಡಬೇಕು ನಂತರ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕು ಆಯ್ಕೆ ಮಾಡಿಕೊಂಡು “ಸಲ್ಲಿಸಿ” ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಸಂಪೂರ್ಣ ವಿವರ ಗೋಚರಿಸುತ್ತದೆ.
ಇನ್ನು ಹೆಚ್ಚಿನ ಮಾಹಿತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ: https://dwcd.karnataka.gov.in/
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Application Invitation for the post of Anganwadi Assistant Recruitment-2023 #anganawadi
More Stories
ITI ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ 240 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ!
BMTC ಬಸ್ ಡಿಕ್ಕಿಯಾಗಿ ಮಹಿಳೆ ದುರ್ಮರಣ
SSLC ಪಾಸಾದವರಿಗೆ ಸರ್ಕಾರಿ ಉದ್ಯೋಗ