ಬೆಂಗಳೂರು: ಪ್ರಸ್ತುತ ಸಾಲಿಗೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಶುಲ್ಕ ಮರುಪಾವತಿ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು ,ಅರ್ಜಿ ಸಲ್ಲಿಸಲು ಆನ್‌ಲೈನ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ ಪೋರ್ಟಲ್) https://ssp.karnataka.go.in/ ಜಾಲತಾಣಕ್ಕೆ ಭೇಟಿ ನೀಡಬೇಕು.
ಇದನ್ನು ಓದಿ –ಭಾರತದ ರೈಲು, ಪೆಟ್ರೋಲ್ ಪೈಪ್‌ಲೈನ್‌ಗಳ ಮೇಲೆ ದಾಳಿ ಬೆದರಿಕೆ
ಅರ್ಹತೆ
- ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
- ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷ ಮೀರಿರಬಾರದು.
- ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.
- ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಯೋಜನೆಯ ಪ್ರಯೋಜನೆ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
- ಈ ಹಿಂದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು.
- ಶುಲ್ಕ ಮರುಪಾವತಿ ಯೋಜನೆಯ ಪ್ರಕಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರ ಆದೇಶಗಳು ಹಾಗೂ ಮಾರ್ಗಸೂಚನೆಗಳಿಗೆ ಒಳಪಟ್ಟಿರುತ್ತದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ