ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Team Newsnap
1 Min Read

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಲಿತೊಟ್ಟಿಲು ಗ್ರಾಮದಲ್ಲಿ ಶ್ರೀ ಕಾಲಭೈರವ ವಸತಿ ಪ್ರೌಢಶಾಲೆಯಲ್ಲಿ ಮಾಜಿ ಸೈನಿಕರ ಮೀಸಲಾತಿಯಡಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಇಡಿ. ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಆಸಕ್ತ ಅಭ್ಯರ್ಥಿಗಳು ಸಂಬಂಧಿತ ಶೈಕ್ಷಣಿಕ ಹಾಗೂ ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಜುಲೈ-13 ರಂದು ಮ.01 ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮೈಸೂರು , ಮಂಡ್ಯ , ಹಾಸನ ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ

ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

Share This Article
Leave a comment