December 22, 2024

Newsnap Kannada

The World at your finger tips!

government , job , India

2,000 ಭೂಮಾಪಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Spread the love

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕರುಗಳ ಕೊರತೆ ನೀಗಲು 2,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ ‍ ಲೈನ್ ಮುಖಾಂತರ ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾರ್ಚ್ 10 ರ ವರೆಗೆ ವಿಸ್ತರಿಸಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದಂತೆ ಒಟ್ಟು 2 ಸಾವಿರ ಲ್ಯಾಂಡ್‌ ಸರ್ವೇಯರ್‌ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಶುಲ್ಕ : ಅರ್ಜಿ ಶುಲ್ಕ ರೂ.1000 ಇಲಾಖಾ ವೆಬ್‍ಸೈಟ್ rdservices.karnataka.gov.in ನಲ್ಲಿ ಆನ್‍ಲೈನ್ ಅರ್ಜಿ ಲಿಂಕ್ ಮೂಡುತ್ತದೆ. ಅಧಿಸೂಚನೆಯನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಳ್ಳುವುದು.

ವಿದ್ಯಾರ್ಹತೆ : ಕನಿಷ್ಟ ಪದವಿಪೂರ್ವ ಶಿಕ್ಷಣ(ಪಿಯುಸಿ) ಅಥವಾ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಜರುಗಿಸುವ 12 ನೇ ತರಗತಿ ಸಿಬಿಎಸ್‍ಸಿ ಅಥವಾ ಐಸಿಎಸ್‍ಇ ಇವುಗಳಲ್ಲಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಕಡಿಮೆ ಇಲ್ಲದೆಂತೆ ಅಂಕ ಪಡೆದು ಉತ್ತೀರ್ಣರಾಗಿರಬೇಕು. ಅಥವಾ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್)/ಅಥವಾ ಬಿ.ಟೆಕ್(ಸಿವಿಲ್)/ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೇಯಲ್ಲಿ ಪದವಿಪೂರ್ವ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುಬೇಕು.

  • ವಯೋಮಿತಿ : ವಯೋಮಿತಿ ಕನಿಷ್ಟ 18 ವರ್ಷ, ಗರಿಷ್ಟ 65 ವರ್ಷ ಮೀರಿರಬಾರದು.

*ಜಿಲ್ಲಾವಾರು ಅವಶ್ಯಕವಿರುವ ಭೂಮಾಪಕರ ಸಂಖ್ಯೆ ನಿಗದಿಪಡಿಸಿದ್ದು ಶಿವಮೊಗ್ಗ ಜಿಲ್ಲೆಗೆ 127 ಸಂಖ್ಯೆ ನಿಗದಿಪಡಿಸಲಾಗಿದೆ. ಅರ್ಹತಾ ಷರತ್ತುಗಳು, ಆಯ್ಕೆಯ ವಿಧಾನ, ತರಬೇತಿ ಸೇರಿದಂತೆ ಇತರೆ ಸೂಚನೆಗಳಿಗೆ ಇಲಾಖಾ ವೆಬ್‍ಸೈಟ್‍ನಲ್ಲಿ ಮಾಹಿತಿ ಪಡೆಯಬಹುದು.

ಭೂಮಾಪಕನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ಧಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ ಅಥವಾ ಏಪ್ರಿಲ್ 2023 ರಲ್ಲಿ ನಡೆಸಲು ಉದ್ದೇಶಿಸಿದೆ.

*ಪರೀಕ್ಷೆಯ ಖಚಿತ ದಿನಾಂಕವನ್ನು ವೆಬ್ ಸೈಟ್ ವಿಳಾಸವಾದ rdservices.karnataka.gov.in ರಲ್ಲಿ ಮತ್ತು ದಿನಪತ್ರಿಕೆಗಳಲ್ಲಿ, 15 ದಿನ ಮುಂಚಿತವಾಗಿ ಪ್ರಚುರಪಡಿಸಲಾಗುವುದು, ನಿಗದಿಪಡಿಸಲಾದ ಅರ್ಜಿಗಳನ್ನು ಸಲ್ಲಿಸಲು ಲಿಂಕ್ ನ್ನು ಮೇಲೆ ತಿಳಿಸಿರುವ ಇಲಾಖಾ ವೆಬ್ ಸೈಟಿನಲ್ಲಿಯೇ ಪ್ರಕಟಿಸಲಾಗಿದೆ.

ಅರ್ಜಿಗಳನ್ನು ಆನ್ ಲೈನ್ (Online) ಮುಖಾಂತರ ಸಲ್ಲಿಸತಕ್ಕದ್ದು ಒಬ್ಬ ಅಭ್ಯರ್ಥಿಯು ಅನ್ ಲೈನ್ ನಲ್ಲಿ ಒಂದು ಅರ್ಜಿಯನ್ನು ಸಲ್ಲಿಸುವುದಕ್ಕೆ ಮಾತ್ತು ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿಗಳನ್ನು ಖುದಾಗಿ ಅಥವಾ ಅಂಚ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ, ಅಪೂರ್ಣವಾದ ಅಥವಾ ನಿಯಮಗಳನ್ನು ಪಾಲಿಸದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ತಿರಸ್ಕರಿಸಲಾಗುವುದು.

ಆನ್ ಲೈನ್ ಮೂಲಕ ಅರ್ಜಿಗಳನ್ನು at rdservices,karnataka.gov.in ನಲ್ಲಿ 10-03-2023 ರ ಸಂಜೆ 5-00 ಗಂಟೆಯ ಒಳಗೆ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಅರ್ಜಿಯನ್ನು ಆನ್ ಲೈನ್ ಸಲ್ಲಿಸುವ ವಿಧಾನ :

ಅರ್ಜಿ ಶುಲ್ಕ ರೂ.1000/-

ಇಲಾಖಾ ವೆಬ್ ಸೈಟ್ ವಿಳಾಸವಾದ rdservices.karnataka.gov.in ನ್ನು ದಾಗ ಆನ್ ಲೈನ್ ಅರ್ಜಿ (Engagement of Licensed Surveyors -2023) Link ಮೂಡುತ್ತವೆ. ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿರುತ್ತದೆ. ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಳ್ಳತಕ್ಕದ್ದು.

ಆನ್ ಲೈನ್ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರವನ್ನು ಬಿಳಿ ಹಾಳೆಯ ಮೇಲೆ ಅಂಟಿಸಿ, ಭಾವಚಿತ್ರದ ಕೆಳಗೆ (ಹಾಳೆಯ ಮೇಲೆ ಪೂರ್ಣ ಸಹಿ ಮಾಡಿದ ನಂತರ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (size 10 to 50 KB) ಸಿದ್ಧತೆ ಮಾಡಿಕೊಳ್ಳಬೇಕು. ಅರ್ಜಿ ತೆರೆಯುವ ಮೊದಲು ಭಾವಚಿತ್ರ ಹಾಗೂ ಸಹಿಯ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳಿಸಬೇಕು ಮತ್ತು ಅದರ ಸೈಜ್ ನ್ನು ಕಡ್ಡಾಯವಾಗಿ ಖಾತರಿಪಡಿಸಿಕೊಳ್ಳಬೇಕು. ಇದನ್ನು ಓದಿ –ಪ್ರಶಾಂತ್ ಮಾಡಾಳ್ ಸೇರಿ ಐವರು 14 ದಿನ ನ್ಯಾಯಾಂಗ ಬಂಧನಕ್ಕೆ

#GovernmentJobs #landSurveyor #onlineJobApplication #GovernmentOfkarnataka #GovernmentJobs #JobAlert #KarnatakaGovernment #JobApplication #thenewsnap

Copyright © All rights reserved Newsnap | Newsever by AF themes.
error: Content is protected !!