ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಸಚಿವೆ ಲಕ್ಷ್ಮಿ

Team Newsnap
1 Min Read

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿದ್ದ ಮಹಿಳೆಯರು ಜುಲೈ 19 ರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದರು.

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿರಬಾರದು. ಅಂತಹವರಿಗೆ ಈ ಯೋಜನೆ ಸೌಲಭ್ಯ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ ಪಡಿತರ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.7.27 ಲಕ್ಷ ರು ತನಕ ಆದಾಯ ತೆರಿಗೆ ಪಾವತಿ ಅಗತ್ಯವಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ

ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು ಎಂದು ತಿಳಿಸಿದರು.

Share This Article
Leave a comment