ಕರ್ನಾಟಕದ ರೈಲ್ವೆ ಇಲಾಖೆಯಲ್ಲಿ 904 ಹುದ್ದೆಗಳಿಗೆ ಅರ್ಜಿ ಆಹ್ವಾನ

Team Newsnap
1 Min Read

ನೈಋತ್ಯ ರೈಲ್ವೆ ನೇಮಕಾತಿ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 2, 2023 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುವುದು.

ಹುಬ್ಬಳ್ಳಿ ವಿಭಾಗದಲ್ಲಿ 237, ಕ್ಯಾರೇಜ್ ರಿಪೇರಿ ಕಾರ್ಯಾಗಾರ ಹುಬ್ಬಳ್ಳಿ- 217, ಬೆಂಗಳೂರು ವಿಭಾಗದಲ್ಲಿ 230, ಮೈಸೂರು ವಿಭಾಗದಲ್ಲಿ 177, ಕೇಂದ್ರ ಕಾರ್ಯಾಗಾರ, ಮೈಸೂರಿನಲ್ಲಿ 43 ಹುದ್ದೆಗಳು ಖಾಲಿ ಇವೆ.

ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿ :

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ಬೋರ್ಡ್‌ನಿಂದ 10ನೇ ತರಗತಿ, ITI, NTC ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ : ನೈಋತ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 2, 2023ಕ್ಕೆ 15 ವರ್ಷಗಳು ಮತ್ತು ಗರಿಷ್ಠ 24 ವರ್ಷಗಳನ್ನ ಮೀರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು PwD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ : SC/ST/PwD ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನ ಪಾವತಿಸಬೇಕು.

ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೈಋತ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪಾವತಿಸಬೇಕಾದ ವೇತನವನ್ನು ನಿಗದಿಪಡಿಸಲಾಗಿಲ್ಲ.ಅಕ್ಕಿ ಬದಲು ಹಣ ಕೊಟ್ರೆ ನಮಗೂ ಕಮೀಷನ್ ಕೊಡಿ: ನ್ಯಾಯಬೆಲೆ ಅಂಗಡಿ ಬಂದ್

ಅರ್ಜಿ ಪ್ರಾರಂಭ ದಿನಾಂಕ 03/07/2023, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 2, 2023 ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

Share This Article
Leave a comment