- ಹೊಸ ಮುಖಗಳಿಗೆ ಆದ್ಯತೆ
- ಪಕ್ಷ ಸಂಘಟನೆಗೆ ಬಿಜೆಪಿ ಪ್ಲಾನ್
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶಿಸಿದ್ದಾರೆ .
ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ.ರಾಜೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ನೂತನ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಜೆ.ಪ್ರೀತಮ್ ಗೌಡ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.
ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು
ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್.ಸಿ.ಮೋರ್ಚಾ ಅಧ್ಯಕ್ಷರಾಗಿ ಎಸ್.ಮಂಜುನಾಥ್
(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ ರೈತ ಮೋರ್ಚಾ ಅಧ್ಯಕ್ಷರಾಗಿ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ್ ಥಾಮಸ್ ಅವರನ್ನು ನೇಮಕ ಮಾಡಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ