ಕೃಷಿ ಇಲಾಖೆಯ ಎರಡು ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ – ಸಚಿವ ಚಲುವರಾಯಸ್ವಾಮಿ

Team Newsnap
1 Min Read

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿ ಇರುವ 2 ಸಾವಿರ ಹುದ್ದೆಗಳ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ .

ಮೊದಲ ಹಂತಗಳಲ್ಲಿ ಕನಿಷ್ಟ 1000 ಹುದ್ದೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದಲ್ಲಿ ವಿವಿಧ ಹುದ್ದೆಗೆ ನೇಮಕಗೊಂಡವರಿಗೆ
ನೇಮಕಾತಿ ಆದೇಶ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆಯಲಿಲ್ಲ ರಾಜ್ಯದಲ್ಲಿ ಹೊಸ ಸರ್ಕಾರ ಬಂದ ನಾಲ್ಕೇ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು .

ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ 32 ಅಭ್ಯರ್ಥಿಗಳು ನೇಮಕಗೊಂಡಿದ್ದಾರೆ ಎಲ್ಲಾರಿಗೂ ನೇಮಕಾತಿ ಆದೇಶವನ್ನು ನೀಡಲಾಗುತ್ತಿದೆ ಎಂದ ಅವರು, ಕೃಷಿ ಇಲಾಖೆಯ ಕೃಷಿ ಅಧಿಕಾರಿ,ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಕುರಿತಂತೆ ಕ್ರಮ ವಹಿಸಲಾಗುತ್ತದೆ ಎಂದರು.

ಇದಕ್ಕೂ ಮುನ್ನ ಸಚಿವ ಎನ್. ಚಲುವರಾಯಸ್ವಾಮಿ ಅವರು ರಾಜ್ಯ ಬೀಜ ನಿಗಮ ಹಾಗೂ ಕರ್ನಾಟಕ ಬೀಜ ಮತ್ತು ಸಾವಯವ ಪ್ರಮಾಣದ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬೀಜ ನಿಗಮದ ಉದ್ದೇಶಗಳು, ಹಾಗು ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ಸರಿಯಾದ ವೇಳೆಗೆ ಸರಿಯಾದ ಸ್ಥಳದಲ್ಲಿ ಯೋಗ್ಯದರದಲ್ಲಿ ಒದಗಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಕರ್ನಾಟಕ ಬೀಜ ಮತ್ತು ಸಾವಯವ ಪ್ರಮಾಣದ ಸಂಸ್ಥೆಯ ಪ್ರಗತಿ ಪರಿಶೀಲನೆ ಹಾಗು ಹಿಂದಿನ ಸಾಲಿನ ಕಾರ್ಯಕ್ರಮಗಳ ಬಗ್ಗೆ ಸಚಿವರು ಸಭೆ ನಡೆಸಿದರು.ರಾಜ್ಯ 5ನೇ ಹಣಕಾಸು ಆಯೋಗ ರಚನೆ

ಬೀಜೋತ್ಪಾದಕರ ಸಂಘವಾರು ನೋಂದಾಯಿತ ಕ್ಷೇತ್ರ ಮತ್ತು ಪ್ರಮಾಣಿಕರಿಸಿದ ದಾಸ್ತಾನು ವಿವರ, ಸಂಸ್ಥೆಯ ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ , ಪ್ರಗತಿ ಬಗ್ಗೆ ಚರ್ಚಿಸಿದ ಸಚಿವರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕಟ್ಟಡ ನಿರ್ಮಾಣ ಕಾಮಗಾರಿ ಗಳನ್ನು ಶೀಘ್ರವಾಗಿ ನಿರ್ಮಾಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಕೃಷಿ‌ ಆಯುಕ್ತ, ವೈ.ಎಸ್.ಪಾಟೀಲ್, ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ನಿರ್ದೇಶಕ ಡಾ.ಜಿ.ಟಿ ಪುತ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share This Article
Leave a comment