ಏ.1 ದಾಸೋಹ ದಿನ,ಬಿಸಿಯೂಟ ಯೋಜನೆಗೆ ಸಿದ್ದಗಂಗಾ ಶ್ರೀಗಳ ಹೆಸರು: ಸಿಎಂ ಘೋಷಣೆ

Team Newsnap
1 Min Read
CM gave compensation of 3 lakhs to journalist Ramumudi Gowda's family ಪತ್ರಕರ್ತ ರಾಮುಮುದಿಗೌಡರ ಕುಟುಂಬಕ್ಕೆ 3 ಲಕ್ಷ ರು ಪರಿಹಾರ ನೀಡಿದ ಸಿಎಂ

ತ್ರಿವಿಧ ದಾಸೋಹ ಮಾಡಿದ ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಇನ್ನು ಮುಂದೆ ಪ್ರತಿ ವಷ೯ವೂ ಏಪ್ರಿಲ್‌ 1 ರಂದು ದಾಸೋಹ ದಿನವೆಂದೂ ಹಾಗೂ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಬಿಸಿಯೂಟ ಯೋಜನೆ ಎಂದು ಹೆಸರಿಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಎಲ್ಲಾ ಸಮುದಾಯದವರನ್ನು ಸೇರಿಸಿ ತ್ರಿವಿಧ ದಾಸೋಹ ಮಾಡಿದವರು ಶ್ರೀಗಳು ಎಂದರು

ಇದೊಂದು ದೈವ ಶಕ್ತಿ, ಇದು ಮನುಷ್ಯರ ಶಕ್ತಿ ಅಲ್ಲ. ಶ್ರೀಗಳ ಧ್ಯೇಯ ಶ್ರದ್ಧೆ, ನಿಷ್ಠೆ, ಪರಿಶ್ರಮವನ್ನು ನಾವು ಪರಿಪಾಲನೆ ಮಾಡಬೇಕು. ಶ್ರೀಗಳಿಗೆ ಜಾತಿ ಭೇದ ಇರಲಿಲ್ಲ. ಸರ್ವೋದಯ ಪರಿಕಲ್ಪನೆ ಈ ಮಠದಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಸರ್ವೋದಯ ಮತ್ತು ಅಂತೋದ್ಯಯ ಈ ಮಠದಲ್ಲಿ ನಡೆಯುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ್ ಸ್ವಾಮೀಜಿ ಹೆಸರಿಡಲಾಗುವುದು ಎಂದು ಘೋಷಿಸಿದರು.

ನಾನು ಭಕ್ತನಾಗಿ ಇವತ್ತು ಕಾರ್ಯಕ್ರಮಕ್ಕೆ ಬಂದಿದ್ದೇನೆ. ಈ ನೆಲದಲ್ಲಿ ಪ್ರೇರಣೆಯ ಶಕ್ತಿ ಇದೆ. ಶಿವಕುಮಾರ್ ಶ್ರೀಗಳ ಪರಂಪರೆಯನ್ನು ಕಿರಿಯ ಶ್ರೀಗಳು ಮುಂದುವರಿಸುತ್ತಿದ್ದಾರೆ. 88 ವರ್ಷ ಈ ನಾಡಿಗೆ ಸಿದ್ದಗಂಗಾ ಶ್ರೀಗಳು ಸೇವೆ ಸಲ್ಲಿಸಿದ್ದಾರೆ. ಇಡೀ ದೇಶದಲ್ಲಿ ಯಾರೂ ಈ ಸೇವೆ ಮಾಡಿರಲಿಲ್ಲ. ಅದಕ್ಕಾಗಿಯೇ ಅವರನ್ನು ನಡೆದಾಡುವ ದೇವರು ಎನ್ನುತ್ತೇವೆ. ಅವರು ಹಚ್ಚಿದ ಹೊಲೆಯ ಕಿಚ್ಚು ಬಡವರ ಹಸಿವಿನ ಕಿಚ್ಚು ನಿಗಿಸುತ್ತಿದೆ. ಅನ್ನ, ಅಕ್ಷರ, ಆಶ್ರಯ ಎಂಬುದನ್ನು ಪಾಲಿಸಿದವರು ಸಿದ್ದಗಂಗಾ ಶ್ರೀಗಳು ಎಂದು ಸ್ಮರಿಸಿದರು.

Share This Article
Leave a comment