February 23, 2026

Newsnap Kannada

The World at your finger tips!

dks

ಆರಗ ಜ್ಞಾನೇಂದ್ರ ಒಬ್ಬ ಹುಚ್ಚ, ನಿಮ್ಹಾನ್ಸ್​​ಗೆ ದಾಖಲಿಸಿ -ಡಿಕೆ ಶಿ ಆಕ್ರೋಶ

Spread the love

ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಹುಚ್ಚ, ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ನಿಮಾನ್ಸ್ ಗೆ ದಾಖಲು ಮಾಡಬೇಕು.

  • ಹೀಗೆಂದು ಹೇಳಿದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.

ಯೂಥ್​ ಕಾಂಗ್ರೆಸ್​ ಚುನಾವಣೆಯಲ್ಲಿ ಹ್ಯಾಕಿಂಗ್​​ ನಡೆಯಲಾಗಿದೆ ಎಂಬ ಮಾತಿನ ಕುರಿತಂತೆ ಪ್ರತಿಕ್ರಿಯೆ ನೀಡಿದ ಡಿಕೆಎಸ್​, ಗೃಹ ಸಚಿವ ಆರಗ ಜ್ಞಾನೇಂದ್ರ ಹುಚ್ಚ, ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ಮೊದಲು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದರು.

ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರ ಹೆಸರುಗಳು ಇವೆ. ಅವರು ಹಗರಣದಲ್ಲಿ ಶಾಮೀಲಾಗಿದ್ದಾರೆ ಅಂತ ಇದೆ ಎಂದು ಹೇಳಿದರು

ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ ಎಂದು ಸವಾಲು ಎಸೆದರು.

error: Content is protected !!