ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗಲೇ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ, ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ಯೋಧ ಬಿ.ಆರ್. ರಾಕೇಶ್ ಇಂದು ಛತ್ತಿಸ್ ಗಡ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅರಕಲಗೂಡು ಪಟ್ಟಣ ಪಂಚಾಯತಿ ನೌಕರರಾಗಿ ಕೆಲಸ ಮಾಡುತ್ತಿರುವ ಯೋಧನ ತಾಯಿ ಶಿವಮ್ಮ, ತಂದೆ ಬಾಣದಹಳ್ಳಿ ರಾಜು ಎಂಬುವವರ ಪುತ್ರನಾದ ಮೃತ ಯೋಧ ರಾಕೇಶ್, ತಾಲೂಕಿನ ಅತ್ನಿ ಗ್ರಾಮದಲ್ಲಿನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಪಟ್ಟಣದ ಕೋಟೆ ಸರ್ಕಾರಿ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಿಕ್ಷಣ ಮತ್ತು ಕಂಚಿರಾಯ ಪ್ರೌಢಶಾಲೆ ಪ್ರೌಢ ಶಿಕ್ಷಣ ಮುಗಿಸಿ, ಪಿಯುಸಿ ನಂತರ ಹಾಸನದ ಎನ್ ಡಿಆರ್ ಕೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗಲೇ ಭಾರತೀಯ ಸೇನೆ ಸೇರಿದ್ದರು.
ಬೆಳಗಾವಿ ಸೈನಿಕ ಶಾಲೆಯಲ್ಲಿ 2018 ರಲ್ಲಿ ಮಿಲಿಟರಿ ಸೇನೆ ತರಬೇತಿ ಪಡೆದು ಹಿಮಾಚಲದಲ್ಲಿ ದೇಶ ಸೇವೆ ಸಲ್ಲಿಸುತ್ತಿದ್ದು ಅನಾರೋಗ್ಯದಿಂದಾಗಿ ಭಾನುವಾರ ಮೃತಪಟ್ಟಿದ್ದಾರೆ.
ಹುತಾತ್ಮ ಯೋಧ ಬಿ. ಆರ್. ರಾಕೇಶ್ ಪಾರ್ಥೀವ ಶರೀರವು ಇಂದು ಸಂಜೆ ಅಥವಾ ಸೋಮವಾರ ಬೆಳಗ್ಗೆ ತಾಲೂಕಿಗೆ ಬರುವ ನಿರೀಕ್ಷೆ ಇದೆ ಎಂದು ಯೋಧನ ಕುಟುಂಬದ ಮೂಲಗಳು ತಿಳಿಸಿವೆ.
ಮಗನನ್ನು ಕಳೆದುಕೊಂಡ ತಂದೆ-ತಾಯಿ ಹಾಗೂ ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ.
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ